ಬೆಂಗಳೂರು:
ಡಿಸಿಎಂ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಶಾಸಕ ಎನ್ ಎ ಹ್ಯಾರಿಸ್ ಅವರು ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಸೋಮವಾರ ಅಧಿಕಾರ ವಹಿಸಿಕೊಂಡರು.
ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರು ಶಾಸಕ ಹ್ಯಾರಿಸ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಎಂಟು ತಿಂಗಳ ಹಿಂದೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸಿಂಗ್ ಬಿಡಿಎ ಅಧ್ಯಕ್ಷ ಸ್ಥಾನವನ್ನು ಹೊಂದಿದ್ದರು.
ಈ ಸಂದರ್ಭದಲ್ಲಿ ಬಿಡಿಎ ಕಮಿಷನರ್ ಜಯರಾಮ್ ಉಪಸ್ಥಿತರಿದ್ದರು.

