ವಿವಾದಿತ ನಾಟಕ ಪ್ರದರ್ಶನದಲ್ಲಿ ಪಾಲ್ಗೊಂಡಿದ್ದ ಜೈನ್ ವಿಶ್ವವಿದ್ಯಾಲಯದ ಸೆಂಟರ್ ಫಾರ್ ಮ್ಯಾನೇಜ್ಮೆಂಟ್ ಸ್ಟಡೀಸ್ನ ಆರು ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ. ಜೈನ್ ವಿಶ್ವವಿದ್ಯಾಲಯದ ಪ್ರಾಂಶುಪಾಲರು, ಡೀನ್, ಕಾರ್ಯಕ್ರಮದ ಆಯೋಜಕರು, ನಾಟಕ ಪ್ರದರ್ಶಿಸಿದ ವಿದ್ಯಾರ್ಥಿಗಳು, ನಾಟಕ ರಚನೆಕಾರರು ಹಾಗೂ ಇತರರ ವಿರುದ್ಧ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದೌರ್ಜನ್ಯ ಪ್ರತಿಬಂಧನ ಕಾಯಿದೆಯನ್ವಯ ಕೇಸ್ ದಾಖಲಿಸಲಾಗಿದೆ.
