ಬೆಂಗಳೂರು:
ವಿಮಾನಗಳಲ್ಲಿ ನಗರಕ್ಕೆ ಬಂದು ಕಳ್ಳತನ ಮಾಡುತ್ತಿದ್ದ ನಾಲ್ವರು ಅಂತಾರಾಜ್ಯ ಕಳ್ಳರನ್ನು ಸಂಜಯನಗರ ಪೊಲೀಸರು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ.
ಉತ್ತರಪ್ರದೇಶ ರಾಜ್ಯದ ಹರಿಶ್ಚಂದ್ರ, ಜಸ್ವೀರ್, ಚ್ದಂರಭಾನು ಹಾಗೂ ದೆಹಲಿಯ ಮಿಂಟು ವಿಶ್ವಾಸ್ ಬಂಧಿತ ಆರೋಪಿಗಳಾಗಿದ್ದಾರೆ.
ಆರೋಪಿಗಳು ಡಾಲರ್ಸ್ ಕಾಲೋನಿಯಲ್ಲಿರುವ ಸಾಫ್ಟ್ ವೇರ್ ಇಂಜಿನಿಯರ್ ಮನೆಯಲ್ಲಿ ಕಳ್ಳತನ ಮಾಡಿದ್ದರು. ಇವರಿಂದ 78 ಲಕ್ಷ ಮೌಲ್ಯದ ಕದ್ದ ಚಿನ್ನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬೆಂಗಳೂರು ನಗರ ಉತ್ತರ ವಿಭಾಗದ ಸಂಜಯ್ ನಗರ ಠಾಣೆ ಪೊಲೀಸರು 48 ಗಂಟೆಗಳಲ್ಲಿ 4 ಆರೋಪಿಗಳನ್ನು ಬಂಧಿಸಿ, 78.65 ಲಕ್ಷ ಮೌಲ್ಯದ 1.430 ಕೆ ಜಿ. ತೂಕದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
— ಬೆಂಗಳೂರು ನಗರ ಪೊಲೀಸ್ BengaluruCityPolice (@BlrCityPolice) August 5, 2023
The Sanjay Nagar Police Station of Bengaluru City North Division arrested 4 accused within 48 hours and seized 1.430 kg gold… pic.twitter.com/KKBwrJem7p
ಜುಲೈ 29 ರಂದು ಡಾಲರ್ಸ್ ಕಾಲೋನಿಯಲ್ಲಿ ಕಳ್ಳತನ ನಡೆಸಿತ್ತು. ಆರೋಪಿಗಳು ವಿಮಾನದಲ್ಲಿ ನಗರಕ್ಕೆ ಬಂದು, ನಂತರ ಯಶವಂತಪುರದಲ್ಲಿರುವ ಹೋಟೆಲ್ ಅಥವಾ ಲಾಡ್ಜ್‌ನಲ್ಲಿ ಕೊಠಡಿ ಕಾಯ್ದಿರಿಸಿಕೊಂಡು ತಂಗುತ್ತಿದ್ದರು.
ನಂತರ ದ್ವಿಚಕ್ರ ವಾಹನಗಳಲ್ಲಿ ನಗರವನ್ನು ಸುತ್ತಿ, ಬೀಗ ಹಾಕಿರುವ ಮನೆಗಳನ್ನು ಗುರುತಿಸಿತ್ತು. ಹೈಟೆಕ್ ಪ್ರದೇಶದಲ್ಲಿರುವ ಮನೆಗಳನ್ನು ಗುರಿಯಾಗಿರಿಸಿಕೊಂಡು ವಾಟ್ಸಾಪ್ ನಲ್ಲಿ ಮಾಹಿತಿಗಳ ಹಂಚಿಕೊಳ್ಳುತ್ತಿದ್ದರು. ಇತ್ತೀಚೆಗೆ ಆರ್ ಎಂವಿ ಎರಡನೇ ಹಂತದ ಡಾಲರ್ಸ್ ಕಾಲೋನಿಯ ಮೆಬಲ್ ಲಿವೀಸ್ ಎಂಬುವವರ ಮನೆಗೆ ಕನ್ನ ಹಾಕಿ ಲಕ್ಷಾಂತರ ಮೌಲ್ಯದ ಚಿನ್ನಾಭಕರಣವನ್ನು ದೋಚಿದ್ದರು.
ಸಂಜಯನಗರ ಠಾಣೆ ಇನ್ಸ್ ಪೆಕ್ಟರ್ ಗುರುಪ್ರಸಾದ್ ನೇತೃತ್ವದ ತಂಡ, ಸಿಸಿಟಿವಿ ಕ್ಯಾಮೆರಾ ಹಾಗೂ ಮೊಬೈಲ್ ಕರೆಗಳ ಮಾಹಿತಿ ಆಧಿರಸಿ ಕಾರ್ಯಾಚರಣೆ ನಡೆಸಿ ಆಂಧ್ರಪ್ರದೇಶ ಹಾಗೂ ದೆಹಲಿಯಲ್ಲಿ ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.
ವೃತ್ತಿಪರ ಕ್ರಿಮಿನಲ್ ಗಳಾಗಿರುವ ಈ ನಾಲ್ವರ ವಿರುದ್ಧ ದೆಹಲಿ, ಕೇರಳ ಹಾಗೂ ಬೆಂಗಳೂರು ಸೇರಿದಂತೆ ಹೊರ ರಾಜ್ಯಗಳಲ್ಲಿ ಪ್ರಕರಣಗಳು ದಾಖಲಾಗಿವೆ.