ಬೆಂಗಳೂರು:
ಹೊಸ ವರ್ಷ ಸಂಭ್ರಮಾಚರಣೆ ನಿರ್ಬಂಧಗಳನ್ನ ಪೊಲೀಸ್ ಕಮಿಷನರ್ ತಿಳಿಸುತ್ತಾರೆ ಎಂದು ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ (BBMP Chief Commissioner Tushar Giri Nath) ಹೇಳಿಕೆ ನೀಡಿದ್ದಾರೆ.
ಬಿಬಿಎಂಪಿಯಿಂದ ಹೊಸ ವರ್ಷಕ್ಕೆ ಕಳೆದ ಬಾರಿಯೂ ಯಾವದೇ ಕಂಡೀಷನ್ ಇರಲಿಲ್ಲ. ಈ ಬಾರಿಯೂ ಯಾವದೇ ನಿರ್ಬಂಧ ಇರೋದಿಲ್ಲ ಎಂದು ಗಿರಿನಾಥ್ ಹೇಳಿದ್ದಾರೆ.
2022 ರಲ್ಲಿ ಕೋವಿಡ್ ಕಾರಣದಿಂದ ನಿರ್ಬಂಧ ಹಾಕಲಾಗಿತ್ತು. ಈ ಬಾರಿಯೂ ಎಲ್ಲಾ ನಿರ್ಬಂಧಗಳು ಸಡಿಲಿಕೆ ಮಾಡುತ್ತೇವೆ. ಸುರಕ್ಷತೆಗೆ ಬಗ್ಗೆ ಪೊಲೀಸ್ ಅಧಿಕಾರಿಗಳು ಗಮನ ಹರಿಸುತ್ತಾರೆ ಎಂದು ಅವರು ಹೇಳಿದರು.