Home ಬೆಂಗಳೂರು ನಗರ Bengaluru Potholes: ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚಲು 7 ಸಾವಿರ ಕೋಟಿ ರೂಪಾಯಿ ವೆಚ್ಚ ಮಾಡಿರುವ...

Bengaluru Potholes: ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚಲು 7 ಸಾವಿರ ಕೋಟಿ ರೂಪಾಯಿ ವೆಚ್ಚ ಮಾಡಿರುವ ವರದಿಗಳು ಸತ್ಯಕ್ಕೆ ದೂರ

30
0
IAS officer Tushar Giri Nath
bengaluru

ಬೆಂಗಳೂರು:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚಲು 7 ಸಾವಿರ ಕೋಟಿ ರೂಪಾಯಿ ವೆಚ್ಚ ಮಾಡಿರುವ ವರದಿಗಳು ಸತ್ಯಕ್ಕೆ ದೂರವಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸೋಮವಾರ ಮಾತನಾಡಿದ ಅವರು, ಗುಂಡಿ ಮುಚ್ಚಲು 7,121 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ ಎಂದು ಕೆಲ ಮಾಧ್ಯಮಗಳಲ್ಲಿ ಉಲ್ಲೇಖಿಸಲಾಗಿದೆ. ಈ ಮೊತ್ತ ಸತ್ಯಕ್ಕೆ ದೂರವಾಗಿವೆ. ಬಿಬಿಎಂಪಿ ಇಷ್ಟೊಂದು ಮೊತ್ತ ಬರೀ ರಸ್ತೆ ಗುಂಡಿಗೆ ವೆಚ್ಚ ಮಾಡಲು ಸಾಧ್ಯವೇ ಇಲ್ಲ ಎಂದು ಹೇಳಿದರು.

ಈ ವರ್ಷ ಹೊರತುಪಡಿಸಿ, ಕಳೆದ ಮೂರು ವರ್ಷಗಳಲ್ಲಿ 119.23 ಕೋಟಿ ರೂಪಾಯಿ ಮಾತ್ರ ಖರ್ಚಾಗಿದೆ. ಈವರೆಗೆ 35 ಸಾವಿರಕ್ಕೂ ಅಧಿಕ ರಸ್ತೆ ಗುಂಡಿಗಳನ್ನು ಮುಚ್ಚಿದ್ದೇವೆ. ಈ ವರ್ಷದೊಳಗೆ 36 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಗುಂಡಿ ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದರು.

LEAVE A REPLY

Please enter your comment!
Please enter your name here