
Bengaluru: PUC student stabbed to death near college
ಬೆಂಗಳೂರು:
ಬೆಂಗಳೂರಿನ ಮಂಜುನಾಥ್ ನಗರದ ಗೌತಮ್ ಕಾಲೇಜು ಬಳಿ ಪ್ರಥಮ ಪಿಯುಸಿ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಆಘಾತಕಾರಿ ಘಟನೆ ಸೋಮವಾರ ನಡೆದಿದೆ.
ಹತ್ಯೆಯಾದ ವಿದ್ಯಾರ್ಥಿಯನ್ನು ಸುಹೇಲ್(18) ಎಂದು ಗುರುತಿಸಲಾಗಿದ್ದು, ಗೌತಮ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ. ಸುಹೇಲ್ ಹಾಗೂ ಇತರ ವಿದ್ಯಾರ್ಥಿಗಳ ನಡುವೆ ಡ್ಯಾನ್ಸ್ ಮಾಡುವ ವಿಚಾರಕ್ಕೆ ಗಲಾಟೆ ಶುರುವಾಗಿದೆ. ಈ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆ ತೀವ್ರವಾಗಿದ್ದು, ಕೊಲೆಯಲ್ಲಿ ಅಂತ್ಯವಾಗಿದೆ.
ಗಲಾಟೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿ ಸುಹೇಲ್ ನನ್ನು ಕೂಡಲೇ ಸಮೀಪದ ಕಾಡೆ ಆಸ್ಪತ್ರೆ ತೆಗೆದುಕೊಂಡು ಹೋಗಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಬಸವೇಶ್ವರನಗರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.