Home Uncategorized Bengaluru Rain; ಇನ್ನೆರಡು ದಿನ ದಕ್ಷಿಣ ಒಳನಾಡಿನ ಹಲವೆಡೆ ಭಾರೀ ಮಳೆ

Bengaluru Rain; ಇನ್ನೆರಡು ದಿನ ದಕ್ಷಿಣ ಒಳನಾಡಿನ ಹಲವೆಡೆ ಭಾರೀ ಮಳೆ

35
0

ಬೆಂಗಳೂರು;- ದಕ್ಷಿಣ ಒಳನಾಡಿನ ಹಲವೆಡೆ ಇನ್ನೂ ಎರಡು ದಿನ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ಮೈಸೂರು, ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣರುತ್ತದೆ. ಒಂದು ಅಥವಾ ಎರಡು ಬಾರಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಸಂಜೆ ಅಥವಾ ರಾತ್ರಿಯ ಸಮಯದಲ್ಲಿ ಮಳೆ ಸುರಿಯಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇನ್ನು ಮುಂದಿನ 48 ಗಂಟೆಯೊಳಗೆ ದಕ್ಷಿಣ ಒಳನಾಡಿನ ಹಾಸನ, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.

The post Bengaluru Rain; ಇನ್ನೆರಡು ದಿನ ದಕ್ಷಿಣ ಒಳನಾಡಿನ ಹಲವೆಡೆ ಭಾರೀ ಮಳೆ appeared first on Ain Live News.

LEAVE A REPLY

Please enter your comment!
Please enter your name here