Bengaluru Rain; ಬೆಂಗಳೂರಿನಲ್ಲಿ ಇನ್ನೆರಡು ದಿನ ಭಾರೀ ಮಳೆ- ಹವಮಾನ ಇಲಾಖೆ
ಬೆಂಗಳೂರು;- ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇನ್ನೆರಡು ದಿನ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಭಾಗದ ಸುತ್ತಮುತ್ತಲು ಇನ್ನೆರಡು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ ಉಲ್ಲೇಖಿಸಿದೆ. ಅಲ್ಲದೆ, ಸಂಜೆ ಅಥವಾ ರಾತ್ರಿ ವೇಳೆಗೆ ಭಾರಿ ಮಳೆಯಾಗುವುದರಿಂದ ಟ್ರಾಫಿಕ್ ಸಮಸ್ಯೆ ಉಂಟಾಗಬಹುದು. ಅಲ್ಲದೆ, ಗಾಳಿಯ ತೀವ್ರತೆಯೂ ಅಲ್ಪ ಪ್ರಮಾಣದಲ್ಲಿ ಹೆಚ್ಚು ಇರಬಹುದು.
ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರುತ್ತದೆ. ಒಂದು ಅಥವಾ ಎರಡು ಬಾರಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಚಾಮರಾಜನಗರ, ಹಾಸನ, ಮೈಸೂರು, ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
The post Bengaluru Rain; ಬೆಂಗಳೂರಿನಲ್ಲಿ ಇನ್ನೆರಡು ದಿನ ಭಾರೀ ಮಳೆ- ಹವಮಾನ ಇಲಾಖೆ appeared first on Ain Live News.