Home ಆರೋಗ್ಯ ಬೆಂಗಳೂರಿನಲ್ಲಿ 5,500 ಸೇರಿ ಇಂದು 8,778 ಪಾಸಿಟಿವ್, 67 ಸಾವು

ಬೆಂಗಳೂರಿನಲ್ಲಿ 5,500 ಸೇರಿ ಇಂದು 8,778 ಪಾಸಿಟಿವ್, 67 ಸಾವು

78
0

ಬೆಂಗಳೂರು:

ರಾಜ್ಯದಲ್ಲಿ ಇಂದು ಬರೋಬ್ಬರಿ 8,778 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 10,83,647ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 67 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 13,008ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 5,500 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,93,869ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 55 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 6,079 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,92,003ಕ್ಕೆ ಏರಿಕೆಯಾಗಿದೆ. ಇನ್ನು 75,985 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 474 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

LEAVE A REPLY

Please enter your comment!
Please enter your name here