Home ಆರೋಗ್ಯ ಬೆಂಗಳೂರಿನಲ್ಲಿ 3509 ಸೇರಿ 4991 ಮಂದಿಗೆ ಪಾಸಿಟಿವ್

ಬೆಂಗಳೂರಿನಲ್ಲಿ 3509 ಸೇರಿ 4991 ಮಂದಿಗೆ ಪಾಸಿಟಿವ್

58
0

ರಾಜ್ಯದಲ್ಲಿ ಇಂದು ಕೊರೋನಾಗೆ 6 ಬಲಿ

ಬೆಂಗಳೂರು:

ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 6 ಸೋಂಕಿತರು ಮೃತಪಟ್ಟಿದ್ದು, ಶುಕ್ರವಾರ 4991 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

ಬೆಂಗಳೂರಿನಲ್ಲಿ ಇಂದು 3509 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,41,242ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ ಐವರು ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಕೊರೋನಾ ಅಬ್ಬರ ಮತ್ತೆ ಹೆಚ್ಚುತ್ತಿದ್ದು, ಸೋಂಕಿತರು ಸಂಖ್ಯೆ 10,06229ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಸಾವಿನ ಸಂಖ್ಯೆ 12,591ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ ಇಂದು 1631 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,59,400ಕ್ಕೆ ಏರಿಕೆಯಾಗಿದೆ. ಇನ್ನು 34219 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 269 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

LEAVE A REPLY

Please enter your comment!
Please enter your name here