Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ಗ್ರಾಮಾಂತರ
  • ಕೋವಿಡ್ ನಿಯಮಗಳ ಪಾಲನೆಯೊಂದಿಗೆ ಸರಳ ಗಣರಾಜ್ಯೋತ್ಸವ ಆಚರಣೆ: ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್
  • ಬೆಂಗಳೂರು ಗ್ರಾಮಾಂತರ

ಕೋವಿಡ್ ನಿಯಮಗಳ ಪಾಲನೆಯೊಂದಿಗೆ ಸರಳ ಗಣರಾಜ್ಯೋತ್ಸವ ಆಚರಣೆ: ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್

The Bengaluru Live January 11, 2022 11:45 PM 1 minute read
Bengaluru Rural district collector directs simple republic celebration amid covid scare

ಕೋವಿಡ್ ನಿಯಮಗಳ ಪಾಲನೆಯೊಂದಿಗೆ ಸರಳ ಗಣರಾಜ್ಯೋತ್ಸವ ಆಚರಣೆ: ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು:

ಕೋವಿಡ್-19 ಮೂರನೇ ಅಲೆಯ ಮುನ್ಸೂಚನೆ ಹಿನ್ನೆಲೆ, ಕೋವಿಡ್ ನಿಯಮಗಳ ಪಾಲನೆಯೊಂದಿಗೆ, ಸರಳವಾಗಿ 73ನೇ ಗಣರಾಜ್ಯೋತ್ಸವವನ್ನು ಆಚರಿಸಲು ಸಕಲ ಸಿದ್ಧತೆ ಕೈಗೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಅಧಿಕಾರಿಗಳಿಗೆ ತಿಳಿಸಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ “73ನೇ ಗಣರಾಜ್ಯೋತ್ಸವ ದಿನಾಚರಣೆ” ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಕಾರ್ಯಕ್ರಮವು ದೇವನಹಳ್ಳಿ ಪಟ್ಟಣದ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಪ್ಲಾಸ್ಟಿಕ್ ರಹಿತ ವೇದಿಕೆ ನಿರ್ಮಿಸಲು ತಿಳಿಸಿದರಲ್ಲದೆ, ವೇದಿಕೆ ಮುಂಭಾಗ ಸಾಂಸ್ಕೃತಿಕ ಕಾರ್ಯಕ್ರಮಗಳಾದ ಜಾನಪದ ಕಲಾ ತಂಡಗಳ ಪ್ರದರ್ಶನ ಆಯೋಜಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗೆ ತಿಳಿಸಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ “73ನೇ ಗಣರಾಜ್ಯೋತ್ಸವ ದಿನಾಚರಣೆ” ಕಾರ್ಯಕ್ರಮದ ಪೂರ್ವಭಾವಿ ಸಭೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. pic.twitter.com/THx24mAyNm

— Deputy Commissioner Bengaluru Rural (@DC_Bng_Rural) January 11, 2022

ಕೃಷಿ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಜಿಲ್ಲೆಯಲ್ಲಿ ಸಾಧನೆ ಮಾಡಿರುವವರನ್ನು ಗುರುತಿಸಿ, ಗೌರವಿಸಲು ಸಂಬಂಧಿಸಿದ ಇಲಾಖಾಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಹೇಳಿದರು.

ಕಾರ್ಯಕ್ರಮದಲ್ಲಿ ಕುಡಿಯುವ ನೀರು, ಲಘು ಉಪಹಾರ ವ್ಯವಸ್ಥೆ ಮಾಡುವಂತೆ ಹಾಗೂ ನೈರ್ಮಲ್ಯ ಕಾಪಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸುವುದರ ಜೊತೆಗೆ ಕಾರ್ಯಕ್ರಮದಲ್ಲಿ ಕೋವಿಡ್ ಮುಂಜಾಗ್ರತಾ ಕ್ರಮಗಳಾದ ಮಾಸ್ಕ್ ಧರಿಸುವಿಕೆ, ಸಮಾಜಿಕ ಅಂತರ ಕಾಯ್ದುಕೊಳ್ಳುವಿಕೆ, ಸ್ಯಾನಿಟೈಸರ್ ಬಳಕೆ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗೆ ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ರೇವಣ್ಣಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ತಿಪ್ಪೇಸ್ವಾಮಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಂಗಮಾರೇಗೌಡ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಭವ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್ ಆರಾಧ್ಯ, ಯುವಜನ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ಹೇಮಾವತಿ.ಜೆ, ದೇವನಹಳ್ಳಿ ತಹಶೀಲ್ದಾರ್ ಅನಿಲ್‌ಕುಮಾರ್ ಅರೋಲಿಕರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

About the Author

The Bengaluru Live

Administrator

Visit Website View All Posts

Post navigation

Previous: Covid-19: ಕರ್ನಾಟಕವು ವಾರಾಂತ್ಯ ಮತ್ತು ರಾತ್ರಿ ಕರ್ಫ್ಯೂ ಅನ್ನು ಜನವರಿ 31 ರವರೆಗೆ ವಿಸ್ತರಿಸಿದೆ
Next: ಯುವಕರಿಗೆ ಮಾರ್ಗದರ್ಶನ ನೀಡಲು ನೂತನ ಯುವನೀತಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Related Stories

ದೇವನಹಳ್ಳಿಯಲ್ಲಿ ನಡೆದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 71ನೇ ಕನ್ನಡ ರಾಜ್ಯೋತ್ಸವ ಆಚರಣೆಯಲ್ಲಿ ಕ್ರೀಡಾಂಗಣದಲ್ಲಿ ವೃತ್ತಾಕಾರವಾಗಿ ಪ್ರದರ್ಶನ ನೀಡುತ್ತಿರುವ ಬಿಳಿ-ಹಳದಿ ಉಡುಪಿನ ವಿದ್ಯಾರ್ಥಿಗಳು
  • ಕರ್ನಾಟಕ
  • ಬೆಂಗಳೂರು ಗ್ರಾಮಾಂತರ

ಬೆಂಗಳೂರು ಗ್ರಾಮಾಂತರದಲ್ಲಿ 62,854 ಹೆಕ್ಟೇರ್ ಬೆಳೆ ಹಾನಿ: ಪರಿಹಾರಕ್ಕೆ ₹52.88 ಕೋಟಿ ಅಗತ್ಯ ಎಂದು ಅಂದಾಜು

The Bengaluru Live November 1, 2026 7:03 PM
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಧ್ವಜಾರೋಹಣದ ವೇಳೆ ಹೂವಿನಿಂದ ಅಲಂಕರಿಸಿದ ಧ್ವಜಸ್ತಂಭದ ಬಳಿ ವಂದನೆ ಸಲ್ಲಿಸುತ್ತಿರುವ ಭಾಗವಹಿಸಿದವರು
  • ಆರೋಗ್ಯ
  • ಕರ್ನಾಟಕ
  • ಬೆಂಗಳೂರು ಗ್ರಾಮಾಂತರ

ಬೆಂಗಳೂರು ಗ್ರಾಮಾಂತರ ರಾಜ್ಯೋತ್ಸವ: ರಾಷ್ಟ್ರೀಯ ಆರೋಗ್ಯ ಅಭಿಯಾನದ ಮಾಹಿತಿ ವಾಹನಕ್ಕೆ ಜಿಲ್ಲಾಧಿಕಾರಿ ಚಾಲನೆ

The Bengaluru Live November 1, 2026 5:27 PM 1
ಕೃಷಿ ತಳಹದಿ ಚೀಲಗಳಲ್ಲಿ ಅಣಬೆಗಳನ್ನು ಬೆಳೆಸುತ್ತಿರುವುದನ್ನು ತೋರಿಸುವ AI ನಿರ್ಮಿತ ಚಿತ್ರ.
  • ಬೆಂಗಳೂರು ಗ್ರಾಮಾಂತರ
  • ಶಿಕ್ಷಣ

ಹೊಸಕೋಟೆಯಲ್ಲಿ ನವೆಂಬರ್ 12ರಿಂದ ಉಚಿತ ಅಣಬೆ ಬೇಸಾಯ ತರಬೇತಿ

The Bengaluru Live October 30, 2026 10:26 AM

Latest Post

ಚಿಕ್ಕಪೇಟೆ ವಿಭಾಗದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಮ ಉಲ್ಲಂಘನೆ: ಝೆಪ್ಟೊಗೆ ₹25,000 ದಂಡ ಚಿಕ್ಕಪೇಟೆಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಉಲ್ಲಂಘನೆಗಾಗಿ ಝೆಪ್ಟೊ ಅಂಗಡಿಯಲ್ಲಿ ಜಿಬಿಎ ಅಧಿಕಾರಿಗಳ ತಪಾಸಣೆ
  • ಬೆಂಗಳೂರು ನಗರ

ಚಿಕ್ಕಪೇಟೆ ವಿಭಾಗದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಮ ಉಲ್ಲಂಘನೆ: ಝೆಪ್ಟೊಗೆ ₹25,000 ದಂಡ

November 13, 2026 4:40 PM
ಸರ್ಜಾಪುರ–ಹೆಬ್ಬಾಳ ಮೆಟ್ರೋ ಮಾರ್ಗಕ್ಕೆ ಶೀಘ್ರ ಅನುಮೋದನೆ ನೀಡುವಂತೆ ಪ್ರಧಾನಿ ಮೋದಿಗೆ ಶಿವಕುಮಾರ್ ಮನವಿ ಸಿಎಂ ಡಿ.ಕೆ. ಶಿವಕುಮಾರ್ ಅವರ ಎಕ್ಸ್ ಪೋಸ್ಟ್ ಸ್ಕ್ರಿನ್ಶಾಟ್
  • ಬೆಂಗಳೂರು ನಗರ
  • ರಾಜಕೀಯ

ಸರ್ಜಾಪುರ–ಹೆಬ್ಬಾಳ ಮೆಟ್ರೋ ಮಾರ್ಗಕ್ಕೆ ಶೀಘ್ರ ಅನುಮೋದನೆ ನೀಡುವಂತೆ ಪ್ರಧಾನಿ ಮೋದಿಗೆ ಶಿವಕುಮಾರ್ ಮನವಿ

November 13, 2026 4:22 PM
ಪ್ರಧಾನಿ ಮೋದಿಯಿಂದ ವಿಶ್ವದ ಮೊದಲ ಟಿಲ್ಟೆಡ್ ಎಲ್‌ಇಡಿ ಡೋಮ್ ತಾರಾಲಯ ‘COSMOS-Mysuru’ ಲೋಕಾರ್ಪಣೆ ಪ್ರಧಾನಿ ನರೇಂದ್ರ ಮೋದಿಗೆ ಮೈಸೂರಿನಲ್ಲಿ ಸ್ವಾಗತ
  • ಕರ್ನಾಟಕ
  • ಸಿನಿಮಾ

ಪ್ರಧಾನಿ ಮೋದಿಯಿಂದ ವಿಶ್ವದ ಮೊದಲ ಟಿಲ್ಟೆಡ್ ಎಲ್‌ಇಡಿ ಡೋಮ್ ತಾರಾಲಯ ‘COSMOS-Mysuru’ ಲೋಕಾರ್ಪಣೆ

November 13, 2026 4:13 PM
ರೆಡ್ ಲೈನ್ ಅನುಮೋದನೆ, ಡಬಲ್ ಡೆಕ್ಕರ್‌ಗೆ ಅನುಮತಿ, ಪಶ್ಚಿಮ ಘಟ್ಟ ಅಧಿಸೂಚನೆ ಮರುಪರಿಶೀಲನೆ: ಪ್ರಧಾನಿ ಮೋದಿಗೆ ರಾಜ್ಯದ ಮನವಿ ಪತ್ರ ನಮ್ಮ ಮೆಟ್ರೋ ನಿಲ್ದಾಣದ ಮಾದರಿಯನ್ನು ವೀಕ್ಷಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ರೆಡ್ ಲೈನ್ ಅನುಮೋದನೆ, ಡಬಲ್ ಡೆಕ್ಕರ್‌ಗೆ ಅನುಮತಿ, ಪಶ್ಚಿಮ ಘಟ್ಟ ಅಧಿಸೂಚನೆ ಮರುಪರಿಶೀಲನೆ: ಪ್ರಧಾನಿ ಮೋದಿಗೆ ರಾಜ್ಯದ ಮನವಿ ಪತ್ರ

November 13, 2026 3:14 PM
ಮೆಟ್ರೋ ವೆಚ್ಚದಲ್ಲಿ ಕೇಂದ್ರ–ರಾಜ್ಯ ಸಮಾನ ಹೊಣೆಗಾರಿಕೆ ಅಗತ್ಯ: ಪ್ರಧಾನಿ ಮೋದಿಗೆ ಸಿಎಂ ಶಿವಕುಮಾರ್ ಮನವಿ; ಬೆಂಗಳೂರಿಗೆ 500 ಕಿ.ಮೀ. ಮೆಟ್ರೋ ಗುರಿ ನಮ್ಮ ಮೆಟ್ರೋ ರೈಲಿನಲ್ಲಿ ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಬೆಂಗಳೂರು ನಗರ

ಮೆಟ್ರೋ ವೆಚ್ಚದಲ್ಲಿ ಕೇಂದ್ರ–ರಾಜ್ಯ ಸಮಾನ ಹೊಣೆಗಾರಿಕೆ ಅಗತ್ಯ: ಪ್ರಧಾನಿ ಮೋದಿಗೆ ಸಿಎಂ ಶಿವಕುಮಾರ್ ಮನವಿ; ಬೆಂಗಳೂರಿಗೆ 500 ಕಿ.ಮೀ. ಮೆಟ್ರೋ ಗುರಿ

November 13, 2026 3:13 PM
ತಾವರೆಕೆರೆ ಮೆಟ್ರೋ ನಿಲ್ದಾಣದಲ್ಲಿ ನಮ್ಮ ಮೆಟ್ರೋ ಪಿಂಕ್ ಲೈನ್‌ಗೆ ಪ್ರಧಾನಿ ಮೋದಿ, ಸಿಎಂ ಶಿವಕುಮಾರ್ ಚಾಲನೆ ನಿಲ್ದಾಣದಲ್ಲಿ ಹೂಮಾಲೆ ಹಾಕಿದ ನಮ್ಮ ಮೆಟ್ರೋ ಪಿಂಕ್ ಲೈನ್ ರೈಲು; ಹಸಿರು ಬಾವುಟ ಬೀಸುತ್ತಿರುವ ಪ್ರಧಾನಿ ಮೋದಿ ಮತ್ತು ಸಿಎಂ ಶಿವಕುಮಾರ್
  • ಬೆಂಗಳೂರು ನಗರ

ತಾವರೆಕೆರೆ ಮೆಟ್ರೋ ನಿಲ್ದಾಣದಲ್ಲಿ ನಮ್ಮ ಮೆಟ್ರೋ ಪಿಂಕ್ ಲೈನ್‌ಗೆ ಪ್ರಧಾನಿ ಮೋದಿ, ಸಿಎಂ ಶಿವಕುಮಾರ್ ಚಾಲನೆ

November 13, 2026 1:47 PM

ನೀವು ತಪ್ಪಿಸಿಕೊಂಡಿರಬಹುದು

ಚಿಕ್ಕಪೇಟೆಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಉಲ್ಲಂಘನೆಗಾಗಿ ಝೆಪ್ಟೊ ಅಂಗಡಿಯಲ್ಲಿ ಜಿಬಿಎ ಅಧಿಕಾರಿಗಳ ತಪಾಸಣೆ
  • ಬೆಂಗಳೂರು ನಗರ

ಚಿಕ್ಕಪೇಟೆ ವಿಭಾಗದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಮ ಉಲ್ಲಂಘನೆ: ಝೆಪ್ಟೊಗೆ ₹25,000 ದಂಡ

The Bengaluru Live November 13, 2026 4:40 PM
ಸಿಎಂ ಡಿ.ಕೆ. ಶಿವಕುಮಾರ್ ಅವರ ಎಕ್ಸ್ ಪೋಸ್ಟ್ ಸ್ಕ್ರಿನ್ಶಾಟ್
  • ಬೆಂಗಳೂರು ನಗರ
  • ರಾಜಕೀಯ

ಸರ್ಜಾಪುರ–ಹೆಬ್ಬಾಳ ಮೆಟ್ರೋ ಮಾರ್ಗಕ್ಕೆ ಶೀಘ್ರ ಅನುಮೋದನೆ ನೀಡುವಂತೆ ಪ್ರಧಾನಿ ಮೋದಿಗೆ ಶಿವಕುಮಾರ್ ಮನವಿ

The Bengaluru Live November 13, 2026 4:22 PM
ಪ್ರಧಾನಿ ನರೇಂದ್ರ ಮೋದಿಗೆ ಮೈಸೂರಿನಲ್ಲಿ ಸ್ವಾಗತ
  • ಕರ್ನಾಟಕ
  • ಸಿನಿಮಾ

ಪ್ರಧಾನಿ ಮೋದಿಯಿಂದ ವಿಶ್ವದ ಮೊದಲ ಟಿಲ್ಟೆಡ್ ಎಲ್‌ಇಡಿ ಡೋಮ್ ತಾರಾಲಯ ‘COSMOS-Mysuru’ ಲೋಕಾರ್ಪಣೆ

The Bengaluru Live November 13, 2026 4:13 PM
ನಮ್ಮ ಮೆಟ್ರೋ ನಿಲ್ದಾಣದ ಮಾದರಿಯನ್ನು ವೀಕ್ಷಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ರೆಡ್ ಲೈನ್ ಅನುಮೋದನೆ, ಡಬಲ್ ಡೆಕ್ಕರ್‌ಗೆ ಅನುಮತಿ, ಪಶ್ಚಿಮ ಘಟ್ಟ ಅಧಿಸೂಚನೆ ಮರುಪರಿಶೀಲನೆ: ಪ್ರಧಾನಿ ಮೋದಿಗೆ ರಾಜ್ಯದ ಮನವಿ ಪತ್ರ

The Bengaluru Live November 13, 2026 3:14 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಚಿಕ್ಕಪೇಟೆ ವಿಭಾಗದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಮ ಉಲ್ಲಂಘನೆ: ಝೆಪ್ಟೊಗೆ ₹25,000 ದಂಡ
  • ಸರ್ಜಾಪುರ–ಹೆಬ್ಬಾಳ ಮೆಟ್ರೋ ಮಾರ್ಗಕ್ಕೆ ಶೀಘ್ರ ಅನುಮೋದನೆ ನೀಡುವಂತೆ ಪ್ರಧಾನಿ ಮೋದಿಗೆ ಶಿವಕುಮಾರ್ ಮನವಿ
  • ಪ್ರಧಾನಿ ಮೋದಿಯಿಂದ ವಿಶ್ವದ ಮೊದಲ ಟಿಲ್ಟೆಡ್ ಎಲ್‌ಇಡಿ ಡೋಮ್ ತಾರಾಲಯ ‘COSMOS-Mysuru’ ಲೋಕಾರ್ಪಣೆ
  • ರೆಡ್ ಲೈನ್ ಅನುಮೋದನೆ, ಡಬಲ್ ಡೆಕ್ಕರ್‌ಗೆ ಅನುಮತಿ, ಪಶ್ಚಿಮ ಘಟ್ಟ ಅಧಿಸೂಚನೆ ಮರುಪರಿಶೀಲನೆ: ಪ್ರಧಾನಿ ಮೋದಿಗೆ ರಾಜ್ಯದ ಮನವಿ ಪತ್ರ
©Copyright 2025 The Bengaluru Live All rights reserved. | MoreNews by AF themes.