ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಂಸ್ಥೆಗಳು, ವಿಶೇಷ ಶಿಕ್ಷಕರು ಹಾಗೂ ವ್ಯಕ್ತಿಗಳಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ರಾಜ್ಯಮಟ್ಟದಲ್ಲಿ ಆಚರಿಸುವ ವಿಶೇಷ ಚೇತನರ ದಿನಾಚರಣೆ ಸಂದರ್ಭದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಆಸಕ್ತರು ನಿಗದಿತ ನಮೂನೆಯಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ನವೆಂಬರ್ 8ರೊಳಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಜಿಲ್ಲಾಡಳಿತ ಭವನ, ನಂ.03, ನೆಲಮಹಡಿ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ 080-29787441 ಸಂಪರ್ಕಿಸಬಹುದು.
