ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಆವರಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ಸಮಾರಂಭ. ಚಿತ್ರ: ಒದಗಿಸಲಾಗಿದೆ
ಬೆಂಗಳೂರು: 71ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ, ರಾಷ್ಟ್ರೀಯ ಆರೋಗ್ಯ ಅಭಿಯಾನದ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡುವ ಆರೋಗ್ಯ ಇಲಾಖೆಯ ಪ್ರಚಾರ ವಾಹನಕ್ಕೆ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಚಾಲನೆ ನೀಡಿದರು.
ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಕನ್ನಡಾಂಬೆ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು.
ಅಪರ ಜಿಲ್ಲಾಧಿಕಾರಿ ರಂಗನಾಥ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಿವಕುಮಾರ್, ಡಿವೈಎಸ್ಪಿ ಪಾಂಡುರಂಗ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
