Home ಬೆಂಗಳೂರು ನಗರ ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಮರುನಾಮಕರಣ| ರಾಜ್ಯ ಸರ್ಕಾರಕ್ಕೆ ತೀರ್ಮಾನಿಸುವ ಅಧಿಕಾರವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಮರುನಾಮಕರಣ| ರಾಜ್ಯ ಸರ್ಕಾರಕ್ಕೆ ತೀರ್ಮಾನಿಸುವ ಅಧಿಕಾರವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

70
0
Bengaluru South district to be renamed from Ramanagara | State government has the power to decide: Chief Minister Siddaramaiah

ಮೈಸೂರು(ಕೆ.ಆರ್.ನಗರ), ಮೇ 23 : ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಮೂಲಕ ಜಿಲ್ಲೆಯ ಇತಿಹಾಸವನ್ನು ತಿರುಚಲಾಗುತ್ತಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿಯವರು ಟೀಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅಲ್ಲಿನ ಜನರ ಜನಾಭಿಪ್ರಾಯವನ್ನು ಪಡೆದೇ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ. ಕುಮಾರಸ್ವಾಮಿಯವರು ರಾಮನಗರ ಜಿಲ್ಲೆ ಸೃಜಿಸುವಾಗ, ಅಲ್ಲಿನ ಇತಿಹಾಸದ ಬಗ್ಗೆ ಯೋಚಿಸಿರಲಿಲ್ಲವೇ ಎಂದು ಮರುಪ್ರಶ್ನಿಸಿದರು.

LEAVE A REPLY

Please enter your comment!
Please enter your name here