Home ಬೆಂಗಳೂರು ನಗರ Bengaluru | ಮತದಾರರಾಗಿ ಸೇರ್ಪಡೆಗೊಳ್ಳಲು ಡಿಸೆಂಬರ್ 2 ಮತ್ತು 3 ರಂದು ವಿಶೇಷ ನೋಂದಣಿ ಅಭಿಯಾನ

Bengaluru | ಮತದಾರರಾಗಿ ಸೇರ್ಪಡೆಗೊಳ್ಳಲು ಡಿಸೆಂಬರ್ 2 ಮತ್ತು 3 ರಂದು ವಿಶೇಷ ನೋಂದಣಿ ಅಭಿಯಾನ

25
0
Bengaluru | Special registration campaign on December 2 and 3 to enroll as Voters

ಬೆಂಗಳೂರು:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವ ನಿಟ್ಟಿನಲ್ಲಿ ಡಿಸೆಂಬರ್ 2, 3ನೇ 2023 ರಂದು ಎರಡು ದಿನಗಳ ಕಾಲ ನಗರದಾದ್ಯಂತ ವಿಶೇಷ ನೋಂದಣಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ಚುನಾವಣಾಧಿಕಾರಿಗಳು-ಬೆಂಗಳೂರು ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಿನಾಂಕ: 27.10.2023 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿರುತ್ತದೆ. ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ದಿನಾಂಕ: 27.10.2023 ರಿಂದ 09.12.2023 ರವರೆಗೆ ಅವಕಾಶ ಕಲ್ಪಿಸಲಾಗಿರುತ್ತದೆ.

ವಿಶೇಷ ನೋಂದಣಿ ಅಭಿಯಾನಗಳನ್ನು ಬಿಬಿಎಂಪಿಯ ಎಲ್ಲಾ ಕಂದಾಯ ಅಧಿಕಾರಿಗಳು / ಸಹ ಕಂದಾಯ ಅಧಿಕಾರಿಗಳು / ವಾರ್ಡ್ ಕಛೇರಿಗಳು / ಮತಗಟ್ಟೆಗಳಲ್ಲಿ ಆಯೋಜಿಸಲಾಗಿರುತ್ತದೆ. ಬೂತ್ ಮಟ್ಟದ ಅಧಿಕಾರಿಗಳು ಸ್ಥಳದಲ್ಲಿದ್ದು, ನೋಂದಣಿ ಮಾಡಿಕೊಳ್ಳುವುದರ ಜೊತೆಗೆ ಹಕ್ಕು ಮತ್ತು ಆಕ್ಷೇಪಣೆಗಳ ಅರ್ಜಿಗಳನ್ನು ಸಹ ಸ್ವೀಕರಿಸಲಿದ್ದಾರೆ.

ಮತದಾರರು ಈ ವಿಶೇಷ ನೋಂದಣಿ ಅಭಿಯಾನದ ಸದುಪಯೋಗವನ್ನು ಪಡೆದುಕೊಳ್ಳಬಹುದು. ಸಾರ್ವಜನಿಕರು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸುವ ಕುರಿತು (ನಮೂನೆ-6: ಮತದಾರರ ಪಟ್ಟಿಯಲ್ಲಿ ಹೊಸದಾಗಿ ಹೆಸರು ಸೇರ್ಪಡೆಗೊಳಿಸಲು, ನಮೂನೆ-7: ಮತದಾರರ ಪಟ್ಟಿ ಕುರಿತ ಆಕ್ಷೇಪಣೆ ಹಾಗೂ ನಮೂನೆ-8: ಮತದಾರರ ಚೀಟಿಯಲ್ಲಿನ ಬದಲಾವಣೆಗಾಗಿ) ಸಂಬಂಧಿಸಿದ ನಮೂನೆಗಳನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಅಥವಾ ಆನ್‌ಲೈನ್ ಮುಖಾಂತರ ಸ್ವಯಂ ಪ್ರೇರಿತವಾಗಿ Web Portal:- voters.eci.gov.in ಅಥವಾ Voter Helpline Mobile App ನಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ. ಸದರಿ ಅವಕಾಶವನ್ನು ಸಾರ್ವಜನಿಕರಿಗೆ ಸದುಪಯೋಗಪಡಿಸಿಕೊಳ್ಳುವ ಸಲುವಾಗಿ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ಯುವ ಮತದಾರರು ಹೆಚ್ಚು ನೋಂದಣಿಯಾಗಿ: ದೇಶದ ಸರ್ವತೋಮುಖ ಅಭಿವೃದ್ಧಿಗೆಯುವ ಮತದಾರರು ಪ್ರಮುಖ ಪಾತ್ರವಹಿಸಲಿದ್ದು, ದಿನಾಂಕ: 01.01.2024ಕ್ಕೆ 18 ವರ್ಷ ತುಂಬುವ ಎಲ್ಲಾ ಯುವ ಮತದಾರರು ತಮ್ಮ ಹತ್ತಿರದ ಮತಗಟ್ಟೆಗಳ ಬಳಿ ತೆರಳಿ ಫಾರಂ-6ನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಬಹುದು. ಅಥವಾ Web Portal:- voters.eci.gov.in ಅಥವಾ Voter Helpline Mobile App ಮೂಲಕ ಸ್ವಯಂ ಪ್ರೇರಿತವಾಗಿ ನೋಂದಾಯಿಸಿಕೊಳ್ಳಬಹುದಾಗಿದೆ. ನಗರದಲ್ಲಿರುವ ಕಾಲೇಜುಗಳಲ್ಲಿ ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಲು ಜಾಗೃತಿ ಕಾರ್ಯಕ್ರಮಗಳನ್ನು ಹಾಗೂ ಸ್ವೀಪ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.

ಮಾಧ್ಯಮವರು ಸಹಕರಿಸಲು ಕೋರಿಕೆ: ನಗರದಲ್ಲಿ ಹಮ್ಮಿಕೊಂಡಿರುವ ವಿಶೇಷ ನೋಂದಣಿ ಅಭಿಯಾನವು ಇದೇ 2023ರ ಡಿಸೆಂಬರ್ 2 ಮತ್ತು 3ನೇ ತಾರೀಖಿನಂದು ನಡೆಯಲಿದ್ದು, ಎಲ್ಲಾ ಮಾಧ್ಯಮದವರೂ ಈ ಅಭಿಯಾನದ ಕುರಿತು ಹೆಚ್ಚು ಪ್ರಚಾರ ಮಾಡಲು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿಯಾದ ಶ್ರೀ ತುಷಾರ್ ಗಿರಿ ನಾಥ್ ರವರು ರವರು ಕೋರಿರುತ್ತಾರೆ.

LEAVE A REPLY

Please enter your comment!
Please enter your name here