Bengaluru: man was hit in the leg by a pistol misfire in Begur police station | ಬೇಗೂರು ಪೊಲೀಸ್ ಠಾಣೆಯಲ್ಲಿ ಪಿಸ್ತೂಲ್ ನಿಂದ ಮಿಸ್ ಫೈಯರ್ ಆಗಿ ವ್ಯಕ್ತಿಯ ಕಾಲಿಗೆ ತಗುಲಿದ ಗುಂಡು
ಬೆಂಗಳೂರು:
ವೇಗವಾಗಿ ಬಂದ ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ.
ಪಶ್ಚಿಮ ಬಂಗಾಳ ಮೂಲದ ಅನಾಹಿತಾ ಪಾಲ್ (17) ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ವಿದ್ಯಾರ್ಥಿನಿ ಪೋಷಕರೊಂದಿಗೆ ಬನ್ನೇರುಘಟ್ಟ ರಸ್ತೆಯ ಡೈರಿ ಸರ್ಕಲ್ ಬಳಿ ವಾಸವಿದ್ದಳು.
ಜೆಪಿ ನಗರ 3ನೇ ಹಂತದ 8ನೇ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ.
ಈ ವೇಳೆ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.
ಈ ಸಂಬಂಧ ಜಯನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಕಾರು ಚಾಲಕನನ್ನು ಬಂಧನಕ್ಕೊಳಪಡಿಸಿದ್ದಾರೆ.
