ಬೆಂಗಳೂರು:
ಜಗತ್ತು ಇಂದು ಎದುರಿಸುತ್ತಿರುವ ಹಲವಾರು ಸವಾಲುಗಳನ್ನು ಪರಿಹರಿಸುವಲ್ಲಿ ಮಾಹಿತಿ ಹಾಗೂ ತಂತ್ರಜ್ಞಾನ ಕ್ಷೇತ್ರ ನಿರತವಾಗಿದೆ, ಹವಾಮಾನ ಬದಲಾವಣೆಯ ಪರಿಹಾರ, ಆರೋಗ್ಯ ರಕ್ಷಣೆ ಹಾಗೂ ಸೈಬರ್ ಸುರಕ್ಷತೆಯನ್ನು ಖಾತ್ರಿಪಡಿಸುವ ಪ್ರಯತ್ನದಲ್ಲಿ ನಾವಿದ್ದೇವೆ, ನಾವು ಗಡಿಗಳನ್ನು ಮೀರಿ ಸಮಗ್ರ ಪರಿಹಾರಗಳನ್ನು ರೂಪಿಸಬೇಕಾಗಿದೆಯಲ್ಲದೆ, ಒಟ್ಟಾರೆಯಾಗಿ ಮಾನವ ಕುಲಕ್ಕೆ ಪ್ರಯೋಜನವಾಗುವಂತಹ ಆವಿಷ್ಕಾರಗಳಿಗೆ ಆದ್ಯತೆ ನೀಡಬೇಕಾಗಿದೆ ಎಂದು ಗ್ರಾಮೀಣ ಅಭಿವೃದ್ಧಿ, ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ ಅವರು ಹೇಳಿದರು.
ಬೆಂಗಳೂರಿನಲ್ಲಿ 2023ರ ನವೆಂಬರ್ 29ರಿಂದ ಮೂರು ದಿನಗಳ ಕಾಲ ನಡೆಯಲಿರುವ 26ನೆಯ ಬೆಂಗಳೂರು ಟೆಕ್ ಸಮಿಟ್ ಹಿನ್ನಲೆಯಲ್ಲಿ ಇಂದು ನಡೆದ ಗ್ಲೋಬಲ್ ಇನೋವೇಷನ್ ಅಲಿಯನ್ಸ್ ಪಾಲುದಾರರ ಸಭೆಯಲ್ಲಿ ಸಚಿವರು ಮಾತನಾಡಿದರು.
Technological advancement is not confined by geographical borders and It is a collective journey that requires the pooling of knowledge, resources & expertise from across the globe.
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) August 28, 2023
The challenges we face today, whether it's addressing climate change, enhancing healthcare… pic.twitter.com/gcPA8nN528
ಸಾಫ್ಟ್‌ವೇರ್ ರಫ್ತಿನ ವಿಷಯದಲ್ಲಿ ಕರ್ನಾಟಕ ದೇಶದಲ್ಲಿ ಮೊದಲನೆಯ ಸ್ಥಾನದಲ್ಲಿದೆ, ದೇಶದ ಒಟ್ಟಾರೆ ಸಾಫ್ಟ್‌ವೇರ್ ರಫ್ತು ಪ್ರಮಾಣದಲ್ಲಿ ಶೇ.40 ರಾಜ್ಯದ್ದಾಗಿದೆ ಎಂದು ಹೇಳಿದ ಸಚಿವ ಪ್ರಿಯಾಂಕ್ ಖರ್ಗೆ ಅವರು ಬೆಂಗಳೂರು ವಿಶ್ವದ ನಾಲ್ಕನೆ ಅತಿದೊಡ್ಡ ತಂತ್ರಜ್ಞಾನ ಕ್ಲಸ್ಟರ್ ಆಗಿದ್ದು ನಾವು ವಿಶ್ವದ ಅತ್ಯುತ್ತಮ ನುರಿತ ಉದ್ಯೋಗಿಗಳನ್ನು ಹೊಂದಿದ್ದೇವೆ ಎಂದು ಹೇಳಿದರು.
ನಾವು ಭವಿಷ್ಯಕ್ಕಾಗಿ ಹೆಚ್ಚು ಚೇತರಿಸಿಕೊಳ್ಳುವ ಅಗತ್ಯವಿದ್ದು, ಕರ್ನಾಟಕ ಸರ್ಕಾರ ನಾವೀನ್ಯತೆಗಳ ಸವಾಲುಗಳಿಗೆ ಸಿದ್ಧವಿದೆ, ಉದಯೋನ್ಮುಖ ತಂತ್ರಜ್ಞಾನಗಳಿಗಾಗಿ ನಾವು ಕೌಶಲ್ಯ ಸಲಹಾ ಸಮಿತಿಯನ್ನು ಹೊಂದಿದ್ದೇವೆ, ಸೈಬರ್ ಸೆಕ್ಯುರಿಟಿ: ಅಗ್ರಿ ಇನೋವೇಶನ್: ಡೇಟಾ ಸೈನ್ಸ್ ಮತ್ತು ಎಐ, ಏರೋಸ್ಪೇಸ್, ಸೆಮಿಕಂಡಕ್ಟರ್ ಫೇಬಲ್ಸ್, ಮೆಷಿನ್ ಇಂಟೆಲಿಜೆನ್ಸ್ ಮತ್ತು ರೊಬೊಟಿಕ್ಸ್, ಅನಿಮೇಷನ್ ಮುಂತಾದ ಕ್ಷೇತ್ರಗಳಲ್ಲಿ ನಮ್ಮ ಪರಿಣತಿಯಿದೆ; ಆಟೋಮೊಬೈಲ್ ಟೆಕ್, ಗೇಮಿಂಗ್ ವೇಗವರ್ಧಕ ಮತ್ತು ವರ್ತುಲ ಆರ್ಥಿಕ ಪ್ರಯೋಗಾಲಯ ಮುಂತಾದ ಕ್ಷೇತ್ರಗಳಲ್ಲಿಯೂ ನಮ್ಮ ಪರಿಸರ ವ್ಯವಸ್ಥೆಗಳೊಂದಿಗೆ ಸಹಕರಿಸಲು ನಾವು ಬಯಸುತ್ತೇವೆ ಎಂದೂ ಸಚಿವರು ತಮ್ಮ ಭಾಷಣದಲ್ಲಿ ತಿಳಿಸಿದರು.