Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • Bengaluru Tech Summit: ತಂತ್ರಜ್ಞಾನ ಮಾನವನ ಅಭಿವೃದ್ಧಿಗೆ ಸಾಧನ: ಮುಖ್ಯಮಂತ್ರಿ ಸಿದ್ದರಾಮಯ್ಯ
  • ಬೆಂಗಳೂರು ನಗರ

Bengaluru Tech Summit: ತಂತ್ರಜ್ಞಾನ ಮಾನವನ ಅಭಿವೃದ್ಧಿಗೆ ಸಾಧನ: ಮುಖ್ಯಮಂತ್ರಿ ಸಿದ್ದರಾಮಯ್ಯ

Vighnesh Pawar September 4, 2023 2:30 PM 1 minute read
Bengaluru Tech Summit: Technology is a tool for human development: Chief Minister Siddaramaiah

Bengaluru Tech Summit: Technology is a tool for human development: Chief Minister Siddaramaiah

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು:

ತಂತ್ರಜ್ಞಾನ ಮಾನವನ ಅಭಿವೃದ್ಧಿಗೆ ಸಾಧನವಾಗಿದೆ. ಅಂತರಗಳನ್ನು ಕಡಿಮೆ ಮಾಡಿ ಜೀವನಮಟ್ಟ ಸುಧಾರಣೆ, ಸುಸ್ಥಿರ ಅಭಿವೃದ್ಧಿಯನ್ನು ಪ್ರೇರೇಪಿಸುವ ಶಕ್ತಿಯನ್ನು ಇದು ಹೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಇಂದು ಬೆಂಗಳೂರು ಟೆಕ್ ಸಮ್ಮಿಟ್ ಅಂಗವಾಗಿ ಇಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉದ್ಯಮಿಗಳೊಂದಿಗೆ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದರು.

ತಂತ್ರಜ್ಞಾನದ ಅಭಿವೃದ್ಧಿ ಎಲ್ಲರನ್ನು ಒಳಗೊಂಡು ಎಲ್ಲರಿಗೂ ದೊರೆಯುವಂತೆ ಮಾಡುವುದು ನಮ್ಮ ಜವಾಬ್ದಾರಿ. ದೇಶದ ಡಿಜಿಟಲ್ ಭವಿಷ್ಯವನ್ನು ಕರ್ನಾಟಕ ಮುನ್ನಡೆಸಲು ಸಾಧ್ಯವಿದೆ. ನಾವೀನ್ಯತಾ ತಂತ್ರಜ್ಞಾನ ಹಾಗೂ ಪ್ರಗತಿಯೆಡೆಗೆ ನಮ್ಮ ಬದ್ಧತೆಗೆ ಬೆಂಗಳೂರು ಟೆಕ್ ಸಮ್ಮಿಟ್ ಸಾಕ್ಷಿಯಾಗಿದೆ. ತಂತ್ರಜ್ಞಾನದಲ್ಲಿ ನಮ್ಮ ಸಾಧನೆಯನ್ನು ಮಾತ್ರವಲ್ಲದೇ ನಮ್ಮ ರಾಜ್ಯದ ಅದಮ್ಯ ಚೇತನವನ್ನು ವಾಖ್ಯಾನಿಸುತ್ತದೆ. ಅತ್ಯಾಧುನಿಕ ತಂತ್ರಜ್ಞಾನಕ್ಕೆ ಇನ್ನಷ್ಟು ವೇಗವನ್ನು ನೀಡಲು ನಮಗಿರುವ ಅಚಲ ಬದ್ಧತೆಯನ್ನು ಟೆಕ್ ಸಮ್ಮಿಟ್ ಪ್ರತಿನಿಧಿಸುತ್ತದೆ ಎಂದರು.

ಮುಖ್ಯಮಂತ್ರಿ @siddaramaiah ಅವರು ಬೆಂಗಳೂರು ಟೆಕ್ ಸಮ್ಮಿಟ್ ಅಂಗವಾಗಿ ಇಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉದ್ಯಮಿಗಳೊಂದಿಗೆ ಸಂವಾದ ನಡೆಸಿದರು. ಉಪ ಮುಖ್ಯಮಂತ್ರಿ @DKShivakumar, ಐಟಿಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ @PriyankKharge, ಐಟಿ ಕ್ಷೇತ್ರದ ವಿಷನ್ ಗ್ರೂಪ್ ಅಧ್ಯಕ್ಷ ಕ್ರಿಸ್ ಗೋಪಾಲಕೃಷ್ಣನ್ ಹಾಗೂ ಬಿಟಿ ಕ್ಷೇತ್ರದ… pic.twitter.com/ZcdH3ZQkSy

— CM of Karnataka (@CMofKarnataka) September 4, 2023

ವ್ಯವಸ್ಥೆಯಲ್ಲಿ ಸ್ಥಿರತೆ

80ರ ದಶಕದ ಅಂತ್ಯ ಹಾಗೂ 90 ರ ದಶಕದಲ್ಲಿಯೇ ಅಂದಿನ ಪ್ರಧಾನಿ ರಾಜೀವ್ ಗಾಂಧಿ ಅವರ ದೂರದೃಷ್ಟಿಯಂತೆ ಅಂದಿನ ಸರ್ಕಾರ ಐಟಿ/ಬಿಟಿ ಗೆ ಭದ್ರ ಬುನಾದಿಯನ್ನು ಹಾಕಿತ್ತು. ನೀತಿ ನಿರೂಪಣೆ, ತಂತ್ರಜ್ಞಾನ ಹಾಗೂ ಮೂಲಸೌಕರ್ಯದಲ್ಲಿ ಹೂಡಿಕೆ ಮಾಡಲಾಯಿತು. ಕರ್ನಾಟಕದ ಮೊತ್ತಮೊದಲ ಐಟಿ ನೀತಿಯನ್ನು ಅಂದಿನ ಸರ್ಕಾರ 1992 ರಲ್ಲಿ ರೂಪಿಸಿತು. ಈ ನೀತಿಯು ದೇಶಕ್ಕೇ ಮಾದರಿ ಐಟಿ ನೀತಿಯಾಗಿ ಹೊರಹೊಮ್ಮಿತು. ಆಡಳಿತದಲ್ಲಿ ಸುಸ್ಥಿರತೆ ತರಲು ಹಾಗೂ ದೀರ್ಘಾವಧಿ

ಹೂಡಿಕೆಗಳನ್ನು ಕೈಗೊಳ್ಳಲು ಶ್ರಮಿಸಿದೆ ಎಂದರು.

ವಿಶ್ವದಲ್ಲಿಯೇ ಮೊದಲ ಸ್ಥಾನಕ್ಕೇರಲು ಸಮರ್ಥ

ಬೆಂಗಳೂರು ಐಟಿ ರಾಜಧಾನಿಯಾಗಿದ್ದು ಅಗತ್ಯ ಮೂಲಸೌಕರ್ಯಗಳನ್ನು ಹೊಂದಿದೆ. ಬೆಂಗಳೂರು ಐಟಿ/ಬಿಟಿ ರಫ್ತಿನಲ್ಲಿ ಮುಂಚೂಣಿಯಲ್ಲಿದ್ದು , ವಿಶ್ವದಲ್ಲಿಯೇ ಮೊದಲ ಸ್ಥಾನಕ್ಕೇರಲು ಎಲ್ಲಾ ಸಾಮರ್ಥ್ಯವನ್ನು ಹೊಂದಿದ್ದು ನಮ್ಮ ಸರ್ಕಾರ ಈ ಗುರಿಯನ್ನು ಸಾಧಿಸಲು ಹಿಂದೆ ಬೀಳುವುದಿಲ್ಲ ಎಂದರು. ನಾವೀನ್ಯತಾ ವಲಯಗಳು ಬೆಂಗಳೂರಿನಲ್ಲಿ ನೆಲೆಸಿರುವುದು ಅತ್ಯಂತ ಸೂಕ್ತವಾಗಿದೆ ಐಒಟಿ, ಕೃತಕ ಬುದ್ದಿಮತ್ತೆ , ಕ್ವಾಂಟಮ್ ಕಂಪ್ಯೂಟಿಂಗ್ ಮುಂತಾದವುಗಳಲ್ಲಿಯೂ ಮುಂಚೂಣಿಯಲ್ಲಿದೆ. ಜಾಗತಿಕ ಹೂಡಿಕೆ ಹಾಗೂ ಪ್ರತಿಭೆಗಳನ್ನು ಕರ್ನಾಟಕಕ್ಕೆ ಆಕರ್ಷಿಸಲು ಇದು ಸಹಾಯಕವಾಗಿದೆ. ನಾವು ಈ ನಿಟ್ಟಿನಲ್ಲಿ ಈಗಾಗಲೇ ಕಾರ್ಯಪ್ರವೃತ್ತರಾಗಿದ್ದು, ಉತ್ಕೃಷ್ಟತಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಉದ್ಯಮ ಹಾಗೂ ಶಿಕ್ಷಣ ಸಂಸ್ಥೆಗಳ ನಡುವಿನ ಅಂತರವನ್ನು ಕಡಿಮೆ ಮಾಡಲು ಕೌಶಲ್ಯ ಮಂಡಳಿ ರಚನೆ

ಉದ್ಯಮಶೀಲತೆ ಹಾಗೂ ಶಿಕ್ಷಣವನ್ನು ಉದ್ಯಮಗಳ ಅಗತ್ಯಕ್ಕೆ ತಕ್ಕಂತೆ ರೂಪಸಿ ಭವಿಷ್ಯದ ಬೇಡಿಕೆಗಳನ್ನು ಪರಿಣಾಮಕಾರಿಯಾಗಿ ಪೂರೈಸುವಂತೆ ಮಾಡಲಾಗಿದೆ. ಕೌಶಲಾಭಿವೃದ್ಧಿಗೆ ಪ್ರತ್ಯೇಕ ಇಲಾಖೆಯನ್ನು ರಚಿಸಿದ ಮೊದಲ ರಾಜ್ಯ ಕರ್ನಾಟಕ. ಸಂಬಂಧಪಟ್ಟ ಎಲ್ಲಾ ಪಾಲುದಾರರ ಸಹಯೋಗದೊಂದಿದೆ ಕೌಶಲ್ಯ ಮಂಡಳಿ ರಚನೆಯತ್ತಲೂ ನಮ್ಮ ರಾಜ್ಯ ಕಾರ್ಯನಿರ್ವಹಿಸುತ್ತಿದೆ. ಉದ್ಯಮ ಹಾಗೂ ಶಿಕ್ಷಣ ಸಂಸ್ಥೆಗಳ ನಡುವಿನ ಅಂತರವನ್ನು ಕಡಿಮೆ ಮಾಡುವಲ್ಲಿ ಇದೊಂದು ದೊಡ್ಡ ಮೈಲಿಗಲ್ಲಾಗಲಿದೆ ಎಂದರು. ಶಿಕ್ಷಣ ಹಾಗೂ ಉದ್ಯಮ ಕ್ಷೇತ್ರದ ಸಹಯೋಗದಲ್ಲಿ ಭವಿಷ್ಯಕ್ಕೆ ಸಿದ್ದರಾಗಿರುವ ಕಾರ್ಯಪಡೆಯನ್ನು ಸಿದ್ಧಪಡಿಸುವಲ್ಲಿ ನೆರವಾಗಲಿದೆ. ಜಾಗತಿಕ ತಾಪಮಾನ, ಹಾವಾಮಾನ ಬದಲಾವಣೆ, ಸೈಬರ್ ಸೆಕ್ಯೂರಿಟಿ ಮುಂತಾದ ಜಾಗತಿಕ ಸಮಸ್ಯೆಗಳನ್ನು ಎದುರಿಸಲು ನಮ್ಮ ಶಕ್ತಿಯನ್ನು ಬಳಸಲು ನಾವು ಬದ್ಧರಾಗಿದ್ದೇವೆ ಎಂದರು.

ನಾವೀನ್ಯತಾ ವಲಯದಲ್ಲಿ ಸ್ಟಾರ್ಟ್ ಅಪ್ ಹಾಗೂ ಯುವ ಸಂಸ್ಥೆಗಳು ಜೀವನಾಡಿಯಾಗಿವೆ. ಈ ವಲಯದ ಬೆಳವಣಿಗೆಗೆ ಅಗತ್ಯವಿರುವ ಅನುದಾನ ಹಾಗೂ ನೆರವನ್ನು ಒದಗಿಸಲು ನಮ್ಮ ಸರ್ಕಾರ ಸಿದ್ಧವಿದೆ. ತಂತ್ರಜ್ಞಾನ ನಾಯಕತ್ವದಲ್ಲಿ ರಾಷ್ಟ್ರೀಯ ಯೋಜನೆಯನ್ನು ಸಿದ್ಧಪಡಿಸಿ, ನಾವೀನ್ಯತೆ ಹಾಗೂ ಸುಸ್ಥಿರ ಐಟಿ ವಾತಾವರಣವನ್ನು ಸೃಷ್ಟಿಸುವುದು ನಮ್ಮ ಗುರಿ. ಈ ಕುರಿತಂತೆ ಸಲಹೆ ಹಾಗೂ ಸಂವಾದಗಳನ್ನು ಕೈಗೊಳ್ಳಲು ಕರ್ನಾಟಕಕ್ಕಿಂತಲೂ ಉತ್ತಮವಾದ ರಾಜ್ಯವಿಲ್ಲ ಎಂದರು.

ಮೂಲಸೌಕರ್ಯ ಅಭಿವೃದ್ಧಿ

ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಸಾರ್ವಜನಿಕ ಸಾರಿಗೆಯ ಸುಧಾರಣೆ ಹಾಗೂ ಮೂಲಸೌಕರ್ಯವನ್ನು ಅಭಿವೃದ್ಧಿಗೊಳಿಸಲಾಗುವುದು. ಮೆಟ್ರೋ ಸಂಪರ್ಕ ಜಾಲವನ್ನು ಶೀಘ್ರವಾಗಿ ವಿಸ್ತರಿಸಲಾಗುತ್ತಿದ್ದು, ವಿಮಾನನಿಲ್ದಾಣಕ್ಕೆ ಮೆಟ್ರೋ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.

ದೇವನಹಳ್ಳಿ ಪ್ರದೇಶದಲ್ಲಿ ತೈವಾನ್ ಎಲೆಕ್ಟ್ರಾನಿಕ್ಸ್ ಸಂಸ್ಥೆ ಫಾಕ್ಸ್ಕಾನ್ ಸದ್ಯದಲ್ಲಿಯೇ ತನ್ನ ಉತ್ಪಾದನಾ ಘಟಕವನ್ನು ತೆರೆಯುವುದಾಗಿ ಘೋಷಿಸಿದೆ. ಆನೇಕಲ್, ದೊಡ್ಡಬಳ್ಳಾಪುರ ಮತ್ತಿತತರ ನಗರಗಳು ಹೂಡಿಕೆಯ ವಿಸ್ತರಣೆಗೆ ಅವಕಾಶಗಳನ್ನು ಹೊಂದಿದ್ದು ಬೆಂಗಳೂರು ನಗರಕ್ಕೆ ಹತ್ತಿರವಿರುವುದರಿಂದ ಪ್ರಯೋಜನಕಾರಿಯಾಗಿದೆ ಎಂದರು. ಮಂಗಳೂರಿನಲ್ಲಿ ಐಟಿ ಪಾರ್ಕ್ ಸ್ಥಾಪನೆಗೆ ಈಗಾಗಲೇ ವಿವಿಧ ಸಂಸ್ಥೆಗಳು ಆಸಕ್ತಿ ಹೊಂದಿವೆ. ಇದಕ್ಕಾಗಿ ಈಗಾಗಲೇ ಇರುವ ಹೆದ್ದಾರಿಗಳ ಸುಧಾರಣೆ ಹಾಗೂ ಹೊಸ ಹೆದ್ದಾರಿಗಳನ್ನು ನಿರ್ಮಿಸಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಐಟಿಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಐಟಿ ಕ್ಷೇತ್ರದ ವಿಷನ್ ಗ್ರೂಪ್ ಅಧ್ಯಕ್ಷ ಕ್ರಿಸ್ ಗೋಪಾಲಕೃಷ್ಣನ್ ಹಾಗೂ ಬಿಟಿ ಕ್ಷೇತ್ರದ ವಿಷನ್ ಗ್ರೂಪ್ ಅಧ್ಯಕ್ಷರಾದ ಕಿರಣ್ ಮಜುಂದಾರ್ ಷಾ ಮತ್ತಿತರ ಗಣ್ಯರು ಭಾಗವಹಿಸಿದ್ದರು.

About the Author

Vighnesh Pawar

Subscriber

View All Posts

Post navigation

Previous: Bengaluru Tech Summit: ಕರ್ನಾಟಕ ಉದ್ಯೋಗದಾತರ ತವರು ಆಗುವುದರಲ್ಲಿ ಸಂಶಯವಿಲ್ಲ: ಕರ್ನಾಟಕ ಟೆಕ್ ಸಮ್ಮಿಟ್ ನಲ್ಲಿ ಡಿಸಿಎಂ ಶಿವಕುಮಾರ್ ವಿಶ್ವಾಸ
Next: Bengaluru: ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ

Related Stories

ಇ-ಖಾತಾ ಮೇಳದ ವೇಳೆ ಜೆ.ಪಿ. ನಗರದ ಕಚೇರಿಯಲ್ಲಿ ಸಿಬ್ಬಂದಿ ಕೆಲಸ ಮಾಡುತ್ತಿರುವ ಲ್ಯಾಪ್‌ಟಾಪ್ ಪರದೆಯನ್ನು ಮೂವರು ಅಧಿಕಾರಿಗಳು ನೋಡುತ್ತಿರುವುದು
  • ಬೆಂಗಳೂರು ನಗರ
  • ಬೆಂಗಳೂರು

ಇ-ಖಾತಾ ಮೇಳ: ಬೆಂಗಳೂರು ದಕ್ಷಿಣ ನಗರ ಪಾಲಿಕೆಯಲ್ಲಿ ಒಂದೇ ದಿನ 254 ಹೊಸ ಅರ್ಜಿ ಸ್ವೀಕೃತಿ, 93 ವಿಲೇವಾರಿ

The Bengaluru Live November 8, 2026 5:49 PM
ಜಾರಿ ನಿರ್ದೇಶನಾಲಯದ ಅಧಿಕೃತ ಲಾಂಛನ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಕಾಯಿನ್‌ಡಿಸಿಎಕ್ಸ್ ಮತ್ತು ಡೆಲ್ಟಾ ಎಕ್ಸ್‌ಚೇಂಜ್‌ಗೆ ಸಂಬಂಧಿಸಿದ ಸ್ಥಳಗಳಲ್ಲಿ ಇಡಿ ಶೋಧ

The Bengaluru Live November 6, 2026 10:39 PM
ರೈಲು ನಿಲ್ದಾಣದ ನಿರ್ಗಮನ ದ್ವಾರದ ಬಳಿ ಟಿಕೆಟ್ ತಪಾಸಣಾ ಸಿಬ್ಬಂದಿ
  • ಬೆಂಗಳೂರು ನಗರ

ಬೆಂಗಳೂರು ರೈಲ್ವೆ ವಿಭಾಗದ ಟಿಕೆಟ್ ತಪಾಸಣೆಯಲ್ಲಿ 1,302 ಪ್ರಕರಣ ಪತ್ತೆ

The Bengaluru Live November 6, 2026 8:15 PM

Latest Post

ಛಲವಾದಿ ನಾರಾಯಣಸ್ವಾಮಿ ಮನೆಗೆ ಚಾಕು: ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಪ್ರತಿಭಟನೆ; ಪ್ರಿಯಾಂಕ್ ಖರ್ಗೆ ಮೇಲೆ ಎಫ್‌ಐಆರ್‌ಗೆ ಮುನಿಸ್ವಾಮಿ ಆಗ್ರಹ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಮೆಯ ಮುಂದೆ ಕೇಸರಿ ಶಲ್ಯ ಧರಿಸಿ ಫಲಕಗಳೊಂದಿಗೆ ಘೋಷಣೆ ಕೂಗುತ್ತಿರುವ ಬಿಜೆಪಿ ಕಾರ್ಯಕರ್ತರು
  • ರಾಜಕೀಯ
  • ಬೆಂಗಳೂರು

ಛಲವಾದಿ ನಾರಾಯಣಸ್ವಾಮಿ ಮನೆಗೆ ಚಾಕು: ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಪ್ರತಿಭಟನೆ; ಪ್ರಿಯಾಂಕ್ ಖರ್ಗೆ ಮೇಲೆ ಎಫ್‌ಐಆರ್‌ಗೆ ಮುನಿಸ್ವಾಮಿ ಆಗ್ರಹ

November 8, 2026 11:20 PM
ಸುಳ್ಳಿಗೆ ಹಾಸನಾಂಬೆ ತಕ್ಕ ಉತ್ತರ ನೀಡುತ್ತಾಳೆ: ಸಿಎಂ ಡಿ.ಕೆ. ಶಿವಕುಮಾರ್; ಹಾಸನದ ಏಳೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಬೆಂಬಲಕ್ಕೆ ಮನವಿ ಹಾಸನದ ಹಾಸನಾಂಬೆ ದೇವಾಲಯದಲ್ಲಿ ಪತ್ನಿ ಉಷಾ ಅವರೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ರಾಜಕೀಯ

ಸುಳ್ಳಿಗೆ ಹಾಸನಾಂಬೆ ತಕ್ಕ ಉತ್ತರ ನೀಡುತ್ತಾಳೆ: ಸಿಎಂ ಡಿ.ಕೆ. ಶಿವಕುಮಾರ್; ಹಾಸನದ ಏಳೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಬೆಂಬಲಕ್ಕೆ ಮನವಿ

November 8, 2026 11:10 PM
ಬೆಂಗಳೂರು ವಿಮಾನ ನಿಲ್ದಾಣದ ಉದ್ಯೋಗ: ಕನ್ನಡಿಗರೇ ಬಹುಸಂಖ್ಯೆಯ ಸಿಬ್ಬಂದಿ, ಸ್ಥಳೀಯ ಉದ್ಯೋಗದ ಆತಂಕಗಳ ಅರಿವಿದೆ ಎಂದ ಬಿಐಎಎಲ್ ಎತ್ತರದ ಚಾವಣಿ ಮತ್ತು ನುಣುಪಾದ ನೆಲವಿರುವ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರ ವಿಶಾಲ ಒಳಾಂಗಣ
  • ರಾಜಕೀಯ
  • ಬೆಂಗಳೂರು

ಬೆಂಗಳೂರು ವಿಮಾನ ನಿಲ್ದಾಣದ ಉದ್ಯೋಗ: ಕನ್ನಡಿಗರೇ ಬಹುಸಂಖ್ಯೆಯ ಸಿಬ್ಬಂದಿ, ಸ್ಥಳೀಯ ಉದ್ಯೋಗದ ಆತಂಕಗಳ ಅರಿವಿದೆ ಎಂದ ಬಿಐಎಎಲ್

November 8, 2026 7:38 PM
ಹಾಲು, ತುಪ್ಪ, ಬಸ್ ದರ ಏರಿಕೆ ವಿರುದ್ಧ ನವೆಂಬರ್ 11ರಂದು ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಪ್ರತಿಭಟನೆ: ವಿಜಯೇಂದ್ರ ಕೇಸರಿ ಬಿಜೆಪಿ ಶಾಲು ಹಾಕಿಕೊಂಡು ಕೆನೆ ಬಣ್ಣದ ತೋಳುಕುರ್ಚಿಯಲ್ಲಿ ಕುಳಿತು ಪತ್ರಗಳನ್ನು ಹಿಡಿದು ಕೈಸನ್ನೆ ಮಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
  • ರಾಜಕೀಯ
  • ಬೆಂಗಳೂರು

ಹಾಲು, ತುಪ್ಪ, ಬಸ್ ದರ ಏರಿಕೆ ವಿರುದ್ಧ ನವೆಂಬರ್ 11ರಂದು ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಪ್ರತಿಭಟನೆ: ವಿಜಯೇಂದ್ರ

November 8, 2026 6:20 PM
ಕುಮಾರಸ್ವಾಮಿ ಲಂಚ ಆರೋಪ ಸುಳ್ಳು ಎಂದ ಹಾಸನ ಡಿಸಿ ಲತಾಕುಮಾರಿ; ವಾಟ್ಸಾಪ್ ಚಾಟ್ ಕುರಿತು ತನಿಖೆಗೆ ಆಗ್ರಹ ಹಾಸನ ಫಲಕದ ಮುಂದೆ ಗುಲಾಬಿ ಮತ್ತು ಹಳದಿ ಚೌಕಳಿ ಸೀರೆಯಲ್ಲಿ ಕೈಗಳನ್ನು ಜೋಡಿಸಿ ಮಾತನಾಡುತ್ತಿರುವ ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ
  • ರಾಜಕೀಯ
  • ಬೆಂಗಳೂರು

ಕುಮಾರಸ್ವಾಮಿ ಲಂಚ ಆರೋಪ ಸುಳ್ಳು ಎಂದ ಹಾಸನ ಡಿಸಿ ಲತಾಕುಮಾರಿ; ವಾಟ್ಸಾಪ್ ಚಾಟ್ ಕುರಿತು ತನಿಖೆಗೆ ಆಗ್ರಹ

November 8, 2026 6:11 PM
ಇ-ಖಾತಾ ಮೇಳ: ಬೆಂಗಳೂರು ದಕ್ಷಿಣ ನಗರ ಪಾಲಿಕೆಯಲ್ಲಿ ಒಂದೇ ದಿನ 254 ಹೊಸ ಅರ್ಜಿ ಸ್ವೀಕೃತಿ, 93 ವಿಲೇವಾರಿ ಇ-ಖಾತಾ ಮೇಳದ ವೇಳೆ ಜೆ.ಪಿ. ನಗರದ ಕಚೇರಿಯಲ್ಲಿ ಸಿಬ್ಬಂದಿ ಕೆಲಸ ಮಾಡುತ್ತಿರುವ ಲ್ಯಾಪ್‌ಟಾಪ್ ಪರದೆಯನ್ನು ಮೂವರು ಅಧಿಕಾರಿಗಳು ನೋಡುತ್ತಿರುವುದು
  • ಬೆಂಗಳೂರು ನಗರ
  • ಬೆಂಗಳೂರು

ಇ-ಖಾತಾ ಮೇಳ: ಬೆಂಗಳೂರು ದಕ್ಷಿಣ ನಗರ ಪಾಲಿಕೆಯಲ್ಲಿ ಒಂದೇ ದಿನ 254 ಹೊಸ ಅರ್ಜಿ ಸ್ವೀಕೃತಿ, 93 ವಿಲೇವಾರಿ

November 8, 2026 5:49 PM

ನೀವು ತಪ್ಪಿಸಿಕೊಂಡಿರಬಹುದು

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಮೆಯ ಮುಂದೆ ಕೇಸರಿ ಶಲ್ಯ ಧರಿಸಿ ಫಲಕಗಳೊಂದಿಗೆ ಘೋಷಣೆ ಕೂಗುತ್ತಿರುವ ಬಿಜೆಪಿ ಕಾರ್ಯಕರ್ತರು
  • ರಾಜಕೀಯ
  • ಬೆಂಗಳೂರು

ಛಲವಾದಿ ನಾರಾಯಣಸ್ವಾಮಿ ಮನೆಗೆ ಚಾಕು: ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಪ್ರತಿಭಟನೆ; ಪ್ರಿಯಾಂಕ್ ಖರ್ಗೆ ಮೇಲೆ ಎಫ್‌ಐಆರ್‌ಗೆ ಮುನಿಸ್ವಾಮಿ ಆಗ್ರಹ

The Bengaluru Live November 8, 2026 11:20 PM
ಹಾಸನದ ಹಾಸನಾಂಬೆ ದೇವಾಲಯದಲ್ಲಿ ಪತ್ನಿ ಉಷಾ ಅವರೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ರಾಜಕೀಯ

ಸುಳ್ಳಿಗೆ ಹಾಸನಾಂಬೆ ತಕ್ಕ ಉತ್ತರ ನೀಡುತ್ತಾಳೆ: ಸಿಎಂ ಡಿ.ಕೆ. ಶಿವಕುಮಾರ್; ಹಾಸನದ ಏಳೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಬೆಂಬಲಕ್ಕೆ ಮನವಿ

The Bengaluru Live November 8, 2026 11:10 PM
ಎತ್ತರದ ಚಾವಣಿ ಮತ್ತು ನುಣುಪಾದ ನೆಲವಿರುವ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರ ವಿಶಾಲ ಒಳಾಂಗಣ
  • ರಾಜಕೀಯ
  • ಬೆಂಗಳೂರು

ಬೆಂಗಳೂರು ವಿಮಾನ ನಿಲ್ದಾಣದ ಉದ್ಯೋಗ: ಕನ್ನಡಿಗರೇ ಬಹುಸಂಖ್ಯೆಯ ಸಿಬ್ಬಂದಿ, ಸ್ಥಳೀಯ ಉದ್ಯೋಗದ ಆತಂಕಗಳ ಅರಿವಿದೆ ಎಂದ ಬಿಐಎಎಲ್

The Bengaluru Live November 8, 2026 7:38 PM
ಕೇಸರಿ ಬಿಜೆಪಿ ಶಾಲು ಹಾಕಿಕೊಂಡು ಕೆನೆ ಬಣ್ಣದ ತೋಳುಕುರ್ಚಿಯಲ್ಲಿ ಕುಳಿತು ಪತ್ರಗಳನ್ನು ಹಿಡಿದು ಕೈಸನ್ನೆ ಮಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
  • ರಾಜಕೀಯ
  • ಬೆಂಗಳೂರು

ಹಾಲು, ತುಪ್ಪ, ಬಸ್ ದರ ಏರಿಕೆ ವಿರುದ್ಧ ನವೆಂಬರ್ 11ರಂದು ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಪ್ರತಿಭಟನೆ: ವಿಜಯೇಂದ್ರ

The Bengaluru Live November 8, 2026 6:20 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಛಲವಾದಿ ನಾರಾಯಣಸ್ವಾಮಿ ಮನೆಗೆ ಚಾಕು: ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಪ್ರತಿಭಟನೆ; ಪ್ರಿಯಾಂಕ್ ಖರ್ಗೆ ಮೇಲೆ ಎಫ್‌ಐಆರ್‌ಗೆ ಮುನಿಸ್ವಾಮಿ ಆಗ್ರಹ
  • ಸುಳ್ಳಿಗೆ ಹಾಸನಾಂಬೆ ತಕ್ಕ ಉತ್ತರ ನೀಡುತ್ತಾಳೆ: ಸಿಎಂ ಡಿ.ಕೆ. ಶಿವಕುಮಾರ್; ಹಾಸನದ ಏಳೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಬೆಂಬಲಕ್ಕೆ ಮನವಿ
  • ಬೆಂಗಳೂರು ವಿಮಾನ ನಿಲ್ದಾಣದ ಉದ್ಯೋಗ: ಕನ್ನಡಿಗರೇ ಬಹುಸಂಖ್ಯೆಯ ಸಿಬ್ಬಂದಿ, ಸ್ಥಳೀಯ ಉದ್ಯೋಗದ ಆತಂಕಗಳ ಅರಿವಿದೆ ಎಂದ ಬಿಐಎಎಲ್
  • ಹಾಲು, ತುಪ್ಪ, ಬಸ್ ದರ ಏರಿಕೆ ವಿರುದ್ಧ ನವೆಂಬರ್ 11ರಂದು ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಪ್ರತಿಭಟನೆ: ವಿಜಯೇಂದ್ರ
©Copyright 2025 The Bengaluru Live All rights reserved. | MoreNews by AF themes.