Bengaluru: Techie killed his wife and two daughters and committed suicide
ಬೆಂಗಳೂರು:
ಪತ್ನಿ ಮತ್ತು ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬುಧವಾರ ರಾತ್ರಿ ಶೀಗೆಹಳ್ಳಿಯ ಸಾಯಿ ಗಾರ್ಡನ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ.
ಆಂಧ್ರ ಪ್ರದೇಶ ಮೂಲದ ಟೆಕ್ಕಿ ವೀರಾರ್ಜುನ ವಿಜಯ್(31) ಅವರು ತಮ್ಮ ಪತ್ನಿ ಹೇಮಾವತಿ(29) ಮತ್ತು ಒಂದೂವರೆ ವರ್ಷ ಮತ್ತು 8 ತಿಂಗಳ ಎರಡು ಹೆಣ್ಣುಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಎಫ್ಎಸ್ಎಲ್ ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಈ ಸಂಬಂಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಖಾಸಗಿ ಕಂಪೆನಿಯಲ್ಲಿ ಟೆಕ್ಕಿಯಾಗಿದ್ದ ವೀರಾರ್ಜುನ ವಿಜಯ್, ಕಳೆದ 6 ವರ್ಷದಿಂದ ವೈಟ್ ಫೀಲ್ಡ್ ಸಮೀಪದ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ಮೊದಲು ಪತ್ನಿ ಹಾಗೂ ಮಕ್ಕಳನ್ನ ಕೊಲೆಗೈದು ಬಳಿಕ ವೀರಾರ್ಜುನ ವಿಜಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
