Home ಬೆಂಗಳೂರು ನಗರ Bengaluru: ಯಾವುದೇ ರೀತಿಯಲ್ಲಿ ಮತದಾನ ಗೌಪ್ಯತೆ ಉಲ್ಲಂಘನೆಯಾಗಿಲ್ಲ: ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ

Bengaluru: ಯಾವುದೇ ರೀತಿಯಲ್ಲಿ ಮತದಾನ ಗೌಪ್ಯತೆ ಉಲ್ಲಂಘನೆಯಾಗಿಲ್ಲ: ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ

18
0
Bengaluru: There was no violation of voting privacy: Chief Electoral Officer Manoj Kumar Meena
  • ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯ ಏಜೆಂಟ್‌ ನೀಡಿದ್ದ ದೂರು ವಿಲೇವಾರಿ

ಬೆಂಗಳೂರು ಏಪ್ರಿಲ್‌ 14: ದಿನಾಂಕ 13-04-2024 ರಂದು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪರ ಏಜೆಂಟ್‌ ನೀಡಿದ್ದ ಹಿರಿಯ ನಾಗರೀಕರ ಮತದಾನದ ಸಮಯದಲ್ಲಿ ಮತದಾನದ ಗೌಪ್ಯತೆ ಮತ್ತು ಮತದಾರರಿಗೆ ಪ್ರಭಾವ ಬೀರುವ ಚಟುವಟಿಕೆಗಳು ನಡೆದಿದೆ ಎನ್ನಲಾದ ದೂರನ್ನ ಕೂಲಕಂಷವಾಗಿ ಪರಿಶೀಲಿಸಲಾಗಿದೆ. ಈ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯಲ್ಲೂ ಮತದಾನದ ಗೌಪ್ಯತೆಯ ಉಲ್ಲಂಘನೆ ಆಗಿಲ್ಲ ಹಾಗೂ ಮತದಾರರಿಗೆ ಪ್ರಭಾವ ಬೀರುವ ಚಟುವಟಿಕೆಗಳು ಆಗಿಲ್ಲ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳಾದ ಮನೋಜ್ ಕುಮಾರ್ ಮೀನಾ ಅವರು ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆಯನ್ನು ನೀಡಿರುವ ಅವರು, ವಾರ್ಡ್‌ ಸಂಖ್ಯೆ: 108 ಶ್ರೀರಾಮಮಂದಿರ, ರಾಜಾಜಿನಗರ ಬೆಂಗಳೂರು ಇಲ್ಲಿ ದಿನಾಂಕ: 13.04.2024 ರಂದು 85 ವರ್ಷಕ್ಕೂ ಮೇಲ್ಪಟ್ಟ ಹಿರಿಯ ನಾಗರೀಕರ ಮತದಾನದ ಸಮಯದಲ್ಲಿ ಮತದಾನದ ಗೌಪ್ಯತೆ ಕಾಪಾಡಿಕೊಳ್ಳಲಾಗಿಲ್ಲ ಮತ್ತು ಮತದಾರರಿಗೆ ಪ್ರಭಾವ ಬೀರಲಾಗಿದೆ ಎಂದು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಏಜೆಂಟರು ದೂರು ನೀಡಿದ್ದರು. ಈ ಬಗ್ಗೆ ತುರ್ತಾಗಿ ತನಿಖೆ ನಡೆಸಿ ವರದಿಯನ್ನು ನೀಡುವಂತೆ ಜಿಲ್ಲಾ ಚುನಾವಣಾಧಿಕಾರಿ ಬೆಂಗಳೂರು ಹಾಗೂ ಮುಖ್ಯ ಆಯುಕ್ತರು ಬಿಬಿಎಂಪಿ ಇವರಿಗೆ ಸೂಚನೆ ನೀಡಲಾಗಿತ್ತು.

ಈ ಬಗ್ಗೆ ಕೂಲಂಕುಷವಾಗಿ ಪರಿಶೀಲನೆ ನಡೆಸಿರುವ ಜಿಲ್ಲಾ ಚುನಾವಣಾಧಿಕಾರಿಗಳು ವರದಿಯನ್ನು ನೀಡಿದ್ದು, ಈ ವರದಿಯಲ್ಲಿ ವಿಡಿಯೋ ಚಿತ್ರಿಕರಣ, ಛಾಯಾಚಿತ್ರಗಳ ಪರಿಶೀಲನೆ ಹಾಗೂ ಮೈಕ್ರೋ ಅಬ್ಸರ್ವರ್‌ ಅವರ ವರದಿಯ ಆಧಾರದ ಮೇಲೆ ಮತದಾನದ ಗೌಪ್ಯತೆಯನ್ನು ಉಲ್ಲಂಘನೆ ಆಗಿಲ್ಲ ಹಾಗೂ ಮತದಾರರಿಗೆ ಪ್ರಭಾವ ಬೀರುವ ಚಟುವಟಿಕೆಗಳು ಆಗಿಲ್ಲ ಎಂಬುದನ್ನ ತಿಳಿಸಿದ್ದಾರೆ.

ಒಂದು ಮನೆಯಿಂದ ಇನ್ನೊಂದು ಮನೆಗೆ ಮತದಾನದ ಪ್ರಕ್ರಿಯೆ ಮಾಡುವಾಗ ಪಿಆರ್‌ಓ ರವರ ಚುನಾವಣಾ ಗುರುತಿನ ಚೀಟಿ ಕಳೆದುಹೋಗಿದ್ದು, ಇನ್ನುಳಿದ ಪೋಲಿಂಗ್‌ ಅಧಿಕಾರಿಗಳು ಗುರುತಿನ ಚೀಟಿಯನ್ನು ಧರಿಸಿಕೊಂಡು ಕರ್ತವ್ಯ ನಿರ್ವಹಿಸಿದ್ದಾರೆ. ಪಿಆರ್‌ಓ ರವರಿಗೆ ತಕ್ಷಣ ಮತ್ತೊಂದು ಚುನಾವಣಾ ಗುರುತಿನ ಚೀಟಿಯನ್ನು ವಿತರಿಸಲಾಗಿದೆ. ಅಂದು ನಡೆದ ಮತದಾನದ ಸಂಧರ್ಭದಲ್ಲಿ ಚುನಾವಣಾ ಕರ್ತವ್ಯಗಳನ್ನು ನಿಯಮಾನುಸಾರ ನಿರ್ವಹಿಸಿ, ಯಾವುದೇ ರೀತಿಯ ಮತದಾನ ಗೌಪ್ಯತೆಯನ್ನು ಉಲ್ಲಂಘನೆ ಮಾಡದೇ ಯಾವುದೇ ಪಕ್ಷದ ಚುನಾವಣೆ ಅಭ್ಯರ್ಥಿಗಳ ಏಜೆಮಟರ್‌ಗಳ ಜೊತೆಗೂಡಿ ಮತದಾರರಿಗೆ ಪ್ರಭಾವ ಬೀರುವಂತಹ ಪ್ರಕ್ರಿಯೆಗಳು ನಡೆಯದೇ ಇರುವುದನ್ನ ವಿಡಿಯೋ ತುಣುಕುಗಳಿಂದ ಖಚಿತಪಡಿಸಿಕೊಳ್ಳಲಾಗಿದೆ.

ಈ ಹಿನ್ನಲೆಯಲ್ಲಿ ದೂರುದಾರರು ಹೇಳೀರುವಂತೆ ಯಾವುದೇ ಮತದಾನದ ಅಧಿಕಾರಿ/ನೌಕರರು ಹಾಗೂ ಕಂದಾಯ ನಿರೀಕ್ಷಕರು ಹಾಗ ಮೈಕ್ರೋ ಅಬ್ಸರ್‌ವರ್‌ ಗಳ ವಿರುದ್ದ ಕ್ರಮ ತಗೆದುಕೊಳ್ಳುವ ಅಂಶ ಕಂಡು ಬರದೇ ಇರುವುದರಿಂದ ದೂರುದಾರರ ದೂರ ಅರ್ಜಿಗಳನ್ನು ಮುಕ್ತಾಯಗೊಳಿಸಿದೆ ಎಂದು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here