ಬೆಂಗಳೂರು: ವಿಧಾನ ಮಂಡಲದ ಅಧಿವೇಶನವು ಫೆ.12 ರಿಂದ 23ರ ವರೆಗೆ ವಿಧಾನಸೌಧದಲ್ಲಿ ನಡೆಯುತ್ತಿದ್ದು ಫೆ.14ರ ಸಂಜೆ 7 ಗಂಟೆಗೆ ನಗರದ ಅರಮನೆ ರಸ್ತೆಯಲ್ಲಿರುವ ಹೊಟೇಲ್ ರ್ಯಾಡಿಸನ್ ಬ್ಲೂನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಾಗಿದೆ.
ವಿರೋಧ ಪಕ್ಷಗಳು ಸರಕಾರದ ವಿರುದ್ಧ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಾಗಿದೆ.
ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೆಪಿಸಿಸಿಯ ಎಲ್ಲ ಕಾರ್ಯಾಧ್ಯಕ್ಷರು ಸೇರಿದಂತೆ ಪಕ್ಷದ ಶಾಸಕರು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.