Home ಆರೋಗ್ಯ ರಾಷ್ಟ್ರವ್ಯಾಪಿ COVID-19 ಲಸಿಕೆ ಅಭಿಯಾನ: ಜಿಲ್ಲೆಗಳಲ್ಲಿ ಬೆಂಗಳೂರು ನಗರ ನಂ .1, ರಾಜ್ಯಗಳಲ್ಲಿ ಕರ್ನಾಟಕ 2...

ರಾಷ್ಟ್ರವ್ಯಾಪಿ COVID-19 ಲಸಿಕೆ ಅಭಿಯಾನ: ಜಿಲ್ಲೆಗಳಲ್ಲಿ ಬೆಂಗಳೂರು ನಗರ ನಂ .1, ರಾಜ್ಯಗಳಲ್ಲಿ ಕರ್ನಾಟಕ 2 ನೇ ಸ್ಥಾನ

57
0

ಬೆಂಗಳೂರು:

ಕೋವಿಡ್-19 ವಿರುದ್ಧದ ಲಸಿಕೆ ಅಭಿಯಾನದಲ್ಲಿ 2,09,256 ಡೋಸ್‌ಗಳನ್ನು ನೀಡುವ ಮೂಲಕ ಬೆಂಗಳೂರು ಅರ್ಬನ್ ದೇಶದ ಜಿಲ್ಲೆಗಳಲ್ಲಿ ಪ್ರಥಮ ಸ್ಥಾನದಲ್ಲಿದ್ದರೆ, ಕರ್ನಾಟಕವು 10.36 ಲಕ್ಷ ಡೋಸ್‌ಗಳನ್ನು ನೀಡುವ ಮೂಲಕ ರಾಜ್ಯಗಳಲ್ಲಿ ಎರಡನೇ ಸ್ಥಾನದಲ್ಲಿದೆ ಎಂದು ಆರೋಗ್ಯ ಸಚಿವ ಕೆ ಸುಧಾಕರ್ ಹೇಳಿದರು.

ಈ ಕುರಿತು ಟ್ವಿಟರ್ ನಲ್ಲಿ ಮಾಹಿತಿ ನೀಡಿರುವ ಸಚಿವರು, ಇಂದು ಒಂದೇ ದಿನದಲ್ಲಿ 78 ಲಕ್ಷಕ್ಕೂ ಅಧಿಕ ಮಂದಿಗೆ ಕೋವಿಡ್‌ ಲಸಿಕೆ ನೀಡುವ ಮೂಲಕ ಭಾರತ ಮಹತ್ವದ ಮೈಲಿಗಲ್ಲು ಸಾಧಿಸಿದೆ. ಕರ್ನಾಟಕದಲ್ಲಿ 10 ಲಕ್ಷಕ್ಕೂ ಅಧಿಕ ಮಂದಿಗೆ ಲಸಿಕೆ ನೀಡಲಾಗಿದ್ದು, ದೇಶದಲ್ಲಿ ನಮ್ಮ ರಾಜ್ಯ ಎರಡನೇ ಸ್ಥಾನದಲ್ಲಿದೆ ಎಂದಿದ್ದಾರೆ.

ರಾಜ್ಯದಲ್ಲಿ ಈವರೆಗೂ ಒಟ್ಟಾರೇ,1.96 ಕೋಟಿ ಲಸಿಕೆ ನೀಡಲಾಗಿದೆ ಎಂದು ಡಾ. ಸುಧಾಕರ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here