ಬೆಂಗಳೂರು ನಗರ ಜಿಪಂ CEO ಯತೀಶ್ ಆರ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಬ್ಯಾಂಕರ್ಗಳ ಸಭೆ; ಸಂಸದ ಪಿ.ಸಿ. ಮೋಹನ್ ಭಾಗಿ
ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯತೀಶ್ ಆರ್ ಅವರ ಅಧ್ಯಕ್ಷತೆಯಲ್ಲಿ DLRC ಹಾಗೂ DCC ಬ್ಯಾಂಕ್ಗಳ ಜಿಲ್ಲಾ ಮಟ್ಟದ ಬ್ಯಾಂಕರ್ಗಳ ಸಭೆ ಶುಕ್ರವಾರ ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಬೆಂಗಳೂರು ಸೆಂಟ್ರಲ್ ಬಿಜೆಪಿ ಸಂಸದ ಪಿ.ಸಿ. ಮೋಹನ್ ಸಭೆಯಲ್ಲಿ ಭಾಗವಹಿಸಿದ್ದರು.
RBI ಸಹಾಯಕ ಪ್ರಧಾನ ವ್ಯವಸ್ಥಾಪಕ ಪ್ರಭಾಕರ್, NABARD ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕ ಉದಯನ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ವಿಠ್ಠಲ್, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಮೋಹನ್ ಹಾಗೂ ವಿವಿಧ ಬ್ಯಾಂಕ್ಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
