
Mystery Over Bengaluru Trekker's Sudden Disappearance in Mudigere: An Intense Search Underway!
ಚಿಕ್ಕಮಗಳೂರು:
ಬೆಂಗಳೂರಿನಿಂದ ಟ್ರಕ್ಕಿಂಗ್ ಬಂದಿದ್ದ ಯುವಕನೋರ್ವ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿ ಗುಡ್ಡದಲ್ಲಿರುವ ರಾಣಿಝರಿ ಪಾಯಿಂಟ್ ನಲ್ಲಿ ಬೈಕ್ ನಿಲ್ಲಿಸಿ ನಾಪತ್ತೆಯಾಗಿದ್ದಾನೆ.
ನಾಪತ್ತೆಯಾದವರನ್ನು ಬೆಂಗಳೂರು ನಿವಾಸಿ ಭರತ್ ಎಂದು ಗುರುತಿಸಲಾಗಿದೆ.
ಬಿ.ಇ. ಮುಗಿಸಿದ್ದ ಭರತ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರೆನ್ನಲಾಗಿದೆ. ಭರತ್ ತನ್ನ ಬೈಕಿನಲ್ಲಿ ರಾಣಿಝರಿ ಪಾಯಿಂಟ್ ಬಂದಿದ್ದರು.
ಮಗನನ್ನು ಹುಡುಕಾಡುತ್ತಾ ಭರತ್ ಹೆತ್ತವರು ಚಿಕ್ಕಮಗಳೂರಿಗೆ ಬಂದಿದ್ದಾರೆ. ಇತ್ತ ರಾಣಿಝರಿ ಪಾಯಿಂಟ್ ನಲ್ಲಿ ಭರತ್ ತನ್ನ ಬೈಕ್ ನಿಲ್ಲಿಸಿದ್ದು, ಗುಡ್ಡದ ತುದಿಯಲ್ಲಿ ಟೀ ಶರ್ಟ್, ಮೊಬೈಲ್, ಸ್ಲಿಪರ್ ಪತ್ತೆಯಾಗಿದೆ.
ಬಾಳೂರು ಪೊಲೀಸರು, ಅರಣ್ಯ ಇಲಾಖೆ ಸಿಬ್ಬಂದಿ ಭರತ್ ಗಾಗಿ ಹುಡುಕಾಟ ಶುರು ಮಾಡಿದ್ದಾರೆ.