ಬೆಂಗಳೂರು:
ಬಿಬಿಎಂಪಿಗೆ ಶೀಘ್ರಗತಿಯಲ್ಲಿ ಚುನಾವಣೆ ನಡೆಸುವಂತೆ ಮಾಜಿ ಮೇಯರ್ಗಳು ಹಾಗೂ ಕಾಂಗ್ರೆಸ್ ಮುಖಂಡರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬುಧವಾರ ಭೇಟಿ ಮಾಡಿ ಮನವಿ ಮಾಡಿಕೊಂಡರು.
ಇದೇ ವೇಳೆ ಅವೈಜ್ಞಾನಿಕ ವಾರ್ಡ್ ವಿಂಗಡಣೆ ಕುರಿತಂತೆಯೂ ಕಳವಳ ವ್ಯಕ್ತಪಡಿಸಿದ ನಾಯಕರ ಈ ಮನವಿಗೆ ಸ್ಪಂದನೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶೀಘ್ರಗತಿಯಲ್ಲಿ ಚುನಾವಣೆ ನಡೆಸುವ ಭರವಸೆ ನೀಡಿದ್ದಾರೆಂದು ತಿಳಿದುಬಂದಿದೆ.
ಮಾಜಿ ಮೇಯರ್ ಮಂಜುನಾಥ್ ರೆಡ್ಡಿ , ಮಾಜಿ ಮೇಯರ್ ಸಂಪತ್ ರಾಜ್, ಬಿಬಿಎಂಪಿಯ ಮಾಜಿ ವಿರೋಧ ಪಕ್ಷದ ನಾಯಕ ಅಬ್ದುಲ್ ವಾಜಿದ್, ಕಾಂಗ್ರೆಸ್ ಮಾಜಿ ನಾಯಕ ಆರ್ ಎಸ್ ಸತ್ಯನಾರಾಯಣ, ಮಾಜಿ ಮೇಯರ್ ಪದ್ಮಾವತಿ, ಕಾಂಗ್ರೆಸ್ ಮುಖಂಡ ವೆಂಕಟೇಶ್ ಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.