ಬೆಂಗಳೂರು:
ಪ್ರತಿ ತಿಂಗಳು ಮೂರನೇ ಶನಿವಾರ ಗ್ರಾಹಕರೊಂದಿಗೆ ಸಂವಾದ ಸಭೆ ನಡೆಸಲಾಗುತ್ತಿದೆ. ಈ ಬಾರಿಯ ಸಭೆಯನ್ನು ಆಗಸ್ಟ್ 19 ರ ಮಧ್ಯಾಹ್ನ 3 ರಿಂದ ಸಂಜೆ 5.30 ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಬೆಸ್ಕಾಂನ ಎಲ್ಲಾ ಉಪವಿಭಾಗಗಳ ವ್ಯಾಪ್ತಿಯಲ್ಲಿ ಗ್ರಾಹಕರ ಕುಂದುಕೊರತೆಗಳನ್ನು ಹಾಗೂ ಸಲಹೆ ಸೂಚನೆಗಳನ್ನು ಆಲಿಸಲು ಈ ಸಂವಾದ ಸಭೆ ಏರ್ಪಡಿಸಿದ್ದು, ವಿದ್ಯುತ್ ಪೂರೈಕೆಗೆ ಸಂಬಂಧಿಸಿದ ದೂರುಗಳನ್ನು ನೇರವಾಗಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದರ ಮೂಲಕ ತಮ್ಮ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ.