Home Uncategorized Betta Kuruba Community: ಪರಿಶಿಷ್ಟ ಪಂಗಡಗಳ ಪಟ್ಟಿಗೆ ಬೆಟ್ಟ ಕುರುಬ ಸಮುದಾಯ ಸೇರ್ಪಡೆ, ಲೋಕಸಭೆಯಲ್ಲಿ ಮಸೂದೆ...

Betta Kuruba Community: ಪರಿಶಿಷ್ಟ ಪಂಗಡಗಳ ಪಟ್ಟಿಗೆ ಬೆಟ್ಟ ಕುರುಬ ಸಮುದಾಯ ಸೇರ್ಪಡೆ, ಲೋಕಸಭೆಯಲ್ಲಿ ಮಸೂದೆ ಅಂಗೀಕಾರ

15
0

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ‘ಬೆಟ್ಟ-ಕುರುಬ’ ಸಮುದಾಯವನ್ನು(Betta Kuruba Community) ‘ಕಾಡು ಕುರುಬ’ ಸಮುದಾಯದ(Kadu Kuruba Community) ಜೊತೆಗೆ ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸುವ ಮಸೂದೆಯನ್ನು ಲೋಕಸಭೆ ಶುಕ್ರವಾರ ಅಂಗೀಕರಿಸಿದೆ. ಚಾಮರಾಜನಗರ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ವಾಸಿಸುತ್ತಿರುವ ಬೆಟ್ಟ-ಕುರುಬ ಸಮುದಾಯದ ಜನರು ತಮ್ಮನ್ನು ಪರಿಶಿಷ್ಟ ಪಂಗಡಗಳ ವರ್ಗಕ್ಕೆ ಸೇರಿಸಬೇಕೆಂದು ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಹೀಗಾಗಿ ರಾಜ್ಯದ ವಿನಂತಿ ಮೇರೆಗೆ ಸಂಸತ್ತಿನ ಕೆಳಮನೆಯ 20ಕ್ಕೂ ಹೆಚ್ಚು ಸದಸ್ಯರು ಚರ್ಚೆಯಲ್ಲಿ ಭಾಗಿಯಾಗಿ ಸಂವಿಧಾನ (ಪರಿಶಿಷ್ಟ ಬುಡಕಟ್ಟುಗಳು) ಆದೇಶ (ನಾಲ್ಕನೇ ತಿದ್ದುಪಡಿ) ಮಸೂದೆ 2022 ಅನ್ನು ಲೋಕಸಭೆಯು ಅಂಗೀಕರಿಸಿತು.

ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಅವರು(Tribal Affairs Minister Arjun Munda) , ಕರ್ನಾಟಕದ ಬೆಟ್ಟ-ಕುರುಬ ಸಮುದಾಯಕ್ಕೆ ನ್ಯಾಯ ಒದಗಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದರು. ಕರ್ನಾಟಕದಲ್ಲಿ ಕೇವಲ 5000 ಸಮುದಾಯದವರು ವಾಸಿಸುತ್ತಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರವು ಕರ್ನಾಟಕದ ಪರಿಶಿಷ್ಟ ಪಂಗಡಗಳ ಪಟ್ಟಿಯಲ್ಲಿ ‘ಬೆಟ್ಟ-ಕುರುಬ’ ಸಮುದಾಯವನ್ನು ‘ಕಾಡು ಕುರುಬ’ ಎಂಬ ಪದದ ಸಮಾನಾರ್ಥಕ ಪದವಾಗಿ ಆದೇಶ, 1950ರ ಪ್ಎವೇಶಾತಿ 16 ಅನ್ನು ಬದಲಾಯಿಸುವ ಮೂಲಕ ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸಿದೆ.

ಇದನ್ನೂ ಓದಿ: ಬೆಟ್ಟ ಕುರುಬ ಜನಾಂಗಕ್ಕೆ ಎಸ್ ಟಿ ಸ್ಥಾನಮಾನ: ಸಚಿವ ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ಬುಡಕಟ್ಟು ಸಚಿವರಿಗೆ ಧನ್ಯವಾದ ತಿಳಿಸಿದ ಕರ್ನಾಟಕದ ಸಂಸದರು

ಪ್ರತಿಪಕ್ಷದ ಸದಸ್ಯರು ಪ್ರಸ್ತಾಪಿಸಿದ ವಿಷಯಗಳಿಗೆ ಪ್ರತಿಕ್ರಿಯಿಸಿದ ಮುಂಡಾ, ಬುಡಕಟ್ಟು ಸಮುದಾಯದ ಕಲ್ಯಾಣಕ್ಕಾಗಿ ಕಾಂಗ್ರೆಸ್ ಏನೂ ಮಾಡಿಲ್ಲ ಮತ್ತು ಈಗ ಮೊಸಳೆ ಕಣ್ಣೀರು ಸುರಿಸುತ್ತಿದೆ ಎಂದು ಆರೋಪಿಸಿದರು. ಸಮಾಜದ ಎಲ್ಲ ವರ್ಗದವರಿಗೂ ನ್ಯಾಯ ಕೊಡಿಸಲು ಮೋದಿ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಮುಂಡಾ ಹೇಳಿದ್ದಾರೆ.

ಡಿಸೆಂಬರ್ 9ರಂದು ಲೋಕಸಭೆಯಲ್ಲಿ ಈ ಮಸೂದೆಯನ್ನು ಮಂಡಿಸಲಾಗಿತ್ತು. ಮಸೂಧೆಯನ್ನು ರಾಜ್ಯಸಭೆಯು ಅಂಗೀಕರಿಸಿದ ನಂತರ ಮತ್ತು ನಿಯಮಗಳನ್ನು ರೂಪಿಸಿದ ನಂತರ, ಬೆಟ್ಟ-ಕುರುಬ ಸಮುದಾಯದ ಸದಸ್ಯರು ಪರಿಶಿಷ್ಟ ಪಂಗಡದ ಸದಸ್ಯರಿಗೆ ಒದಗಿಸುವ ಎಲ್ಲಾ ಪ್ರಯೋಜನಗಳಿಗೆ ಅರ್ಹರಾಗುತ್ತಾರೆ, ವಿಶೇಷವಾಗಿ ಶಿಕ್ಷಣ ಸಂಸ್ಥೆಗಳು ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಸಿಗುತ್ತದೆ.

ಮಸೂದೆ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ ವಿರೋಧ ಪಕ್ಷಗಳ ಹಲವು ಸದಸ್ಯರು, ಸಮುದಾಯಗಳನ್ನು ಎಸ್‌ಟಿ ಪಟ್ಟಿಗೆ ಸೇರಿಸಿದರೆ ಮಾತ್ರ ಪ್ರಯೋಜನವಾಗುವುದಿಲ್ಲ ಮತ್ತು ಅವರಿಗಾಗಿಯೂ ಕಲ್ಯಾಣ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಪರಿಗಣಿಸಬೇಕು ಎಂದು ಹೇಳಿದರು. ಕಾಂಗ್ರೆಸ್ ಸದಸ್ಯ ಕೆ.ಸುರೇಶ್ ಮಾತನಾಡಿ, ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಸರಕಾರ ಈ ಮಸೂದೆ ತಂದಿದೆ. ಬುಡಕಟ್ಟು ಸಮುದಾಯಗಳು ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗಕ್ಕೆ ಸಂಬಂಧಿಸಿದಂತೆ ಕೆಲವು ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿವೆ ಎಂದು ಆರೋಪಿಸಿದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

LEAVE A REPLY

Please enter your comment!
Please enter your name here