ಬೆಂಗಳೂರು : ಕೆ.ಆರ್.ನಗರದ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿರುವ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿ ವಿಚಾರಣೆಗೆ ಬರಬೇಕಿದೆ. ಈಗಾಗಲೇ ಈ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ಭವಾನಿ ರೇವಣ್ಣಗೆ ಎಸ್ಐಟಿ ಪೊಲೀಸರು ನೋಟಿಸ್ ನೀಡಿದ್ದರು. ಅಲ್ಲದೆ, ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಪಾತ್ರ ಇರುವ ಕುರಿತು ಮಾಹಿತಿ ಆಧಾರ ಮೇಲೆ ಎಸ್ಐಟಿ ಪೊಲೀಸರು ತನಿಖೆ ನಡೆಸುತ್ತಿದ್ದರು.