ಬೆಂಗಳೂರು: ಮಲ್ಲೇಶ್ವರದಲ್ಲಿರುವ ಬೆಂಗಳೂರು ಮಹಾನಗರ ಬಿಜೆಪಿ ಕಚೇರಿ “ಭಾವುರಾವ್ ದೇಶಪಾಂಡೆ ಭವನ”ದಲ್ಲಿ ಇಂದು ಭಾವುರಾವ್ ದೇಶಪಾಂಡೆ ಅವರ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ನಾಯಕರು ಭಾವುರಾವ್ ದೇಶಪಾಂಡೆ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಅವರ ಜೀವನಾದರ್ಶಗಳು ಹಾಗೂ ಸಂಘಟನಾ ಕಾರ್ಯದ ಬಗ್ಗೆ ಸ್ಮರಿಸಿದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಉತ್ತರ ಜಿಲ್ಲಾ ಅಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾ ಅಧ್ಯಕ್ಷ ಸಪ್ತಗಿರಿ ಗೌಡ, ಬೆಂಗಳೂರು ಕೇಂದ್ರ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಎಂ. ಗೌತಮ್ ಕುಮಾರ್ ಮತ್ತು ಆರ್. ರಾಘವೇಂದ್ರ ರಾವ್, ಬೆಂಗಳೂರು ಉತ್ತರ ಜಿಲ್ಲಾ ಉಪಾಧ್ಯಕ್ಷೆ ಶ್ರೀಮತಿ ಆಶಾ ರಾವ್, ಕಾರ್ಯದರ್ಶಿ ಶ್ರೀಮತಿ ಮಾಲಾದೇವಿ ಹಾಗೂ ಬೆಂಗಳೂರು ಉತ್ತರ ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷೆ ಶ್ರೀಮತಿ ಮಂಜುಳಾ ದೇವಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಈ ವೇಳೆ ಮಾತನಾಡಿದ ನಾಯಕರು ಭಾವುರಾವ್ ದೇಶಪಾಂಡೆ ಅವರ ಸಂಘಟನಾ ಸೇವೆ ಮತ್ತು ಸಾರ್ವಜನಿಕ ಬದುಕಿನ ಮೌಲ್ಯಗಳನ್ನು ಸ್ಮರಿಸಿ, ಅವರ ಆದರ್ಶಗಳು ಪಕ್ಷದ ಕಾರ್ಯಕರ್ತರಿಗೆ ಪ್ರೇರಣೆಯಾಗಿವೆ ಎಂದು ಹೇಳಿದರು.
