Home ಚಿಕ್ಕಬಳ್ಳಾಪುರ ಭೋಗನಂದೀಶ್ವರ ದೇವಾಲಯದಲ್ಲಿ ದೀಪ ಹಚ್ಚುವಂತಿಲ್ಲ

ಭೋಗನಂದೀಶ್ವರ ದೇವಾಲಯದಲ್ಲಿ ದೀಪ ಹಚ್ಚುವಂತಿಲ್ಲ

63
0
Advertisement
bengaluru

ನಾಳೆ ಕಾರ್ತಿಕ ಸೋಮವಾರ: ದೇವರ ದರ್ಶನಕ್ಕೆ ಅವಕಾಶ

ಚಿಕ್ಕಬಳ್ಳಾಪುರ:

ಇತಿಹಾಸ ಪ್ರಸಿದ್ಧ ದಕ್ಷಿಣ ಕಾಶೀ ಕ್ಷೇತ್ರವೆಂದೇ ಪ್ರಸಿದ್ಧವಾಗಿರುವ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗ್ರಾಮದ ಶ್ರೀ ಭೋಗನಂದೀಶ್ವರ ದೇವಾಲಯ ಹಾಗೂ ಆವರಣದಲ್ಲಿ ನಾಳೆಯಿಂದ ಕಾರ್ತಿಕ ಸೋಮವಾರ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ದೀಪ ಹಚ್ಚುವಂತಿಲ್ಲ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್. ಲತಾ ತಿಳಿಸಿದ್ದಾರೆ.

ನಾಳೆಯಿಂದ ಕಾರ್ತಿಕ ಸೋಮವಾರ ಆರಂಭವಾಗುತ್ತಿದೆ. ಚಿಕ್ಕಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ನಂದಿಯ ಶ್ರೀ ಭೋಗನಂದೀಶ್ವರ ಸ್ವಾಮಿಗೆ ವಿಶೇಷ ಪೂಜಾ ಕೈಂಕರ್ಯಗಳು ನೇರವೇರಲಿವೆ ಹಾಗೂ ದೇವಾಲಯಕ್ಕೆ ಬರುವ ಭಕ್ತಾದಿಗಳಿಗೆ ದೇವರ ದರ್ಶನಕ್ಕಾಗಿ ಅವಕಾಶ ಕಲ್ಪಿಸಲಾಗಿದೆ ಎಂದರು.

ಪ್ರತಿ ವರ್ಷದಂತೆ ಈ ವರ್ಷವೂ ಕಾರ್ತಿಕ ಸೋಮವಾರದ ಪ್ರಯುಕ್ತ ಸಾವಿರಾರು ಮಂದಿ ಭಕ್ತರು ಆಗಮಿಸುತ್ತಾರೆ. ಈ ವರ್ಷವೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ನಂದಿ ದೇವಾಲಯಕ್ಕೆ ಆಗಮಿಸುವ ನಿರೀಕ್ಷೆಯಿದೆ. ಕೊರೊನಾ ಸೋಂಕು ನಿಯಂತ್ರಣ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕೆಲ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ.

bengaluru bengaluru
Chikkaballapur DC R Latha1

ಸೋಮವಾರ ಬೆಳಗ್ಗೆ 5 ಗಂಟೆಯಿಂದ ಸಂಜೆ 8 ಗಂಟೆಯವರೆಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ, ಒಂದು ಬಾರಿಗೆ ದೇವಾಲಯದೊಳಗೆ ಕೇವಲ 300 ಮಂದಿಗಷ್ಟೇ ಪ್ರವೇಶಕ್ಕೆ ಅನುಮತಿಸಲಾಗುವುದು. ಸಾಮಾಜಿಕ ಅಂತರ ಕಾಯ್ದುಕೊಂಡು ಭಕ್ತರು ದೇವರ ದರ್ಶನ ಪಡೆಯಬೇಕಿದ್ದು, ಮಾಸ್ಕ್ ಧರಿಸಿದ್ದರೆ ಮಾತ್ರ ದೇವಾಲಯದೊಳಗೆ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತದೆ ಎಂದರು

ಭಕ್ತರಿಗೆ ಥರ್ಮಲ್ ಸ್ಕ್ಯಾನಿಂಗ್ ಮಾಡಿ ನಂತರ ದೇವಾಲಯದ ಒಳಕ್ಕೆ ಪ್ರವೇಶ ನೀಡಲಾಗುವುದು. ಮತ್ತೊಂದೆಡೆ ಪ್ರತಿ ವರ್ಷ ಕಾರ್ತಿಕ ಸೋಮವಾರದಂದು ದೇವಾಲಯಕ್ಕೆ ಬರುವ ಭಕ್ತರು ದೇವಾಲಯದೊಳಗೆ ಹಾಗೂ ಕಳೆದ ವರ್ಷದಿಂದ ದೇವಾಲಯದ ಹೊರಭಾಗದಲ್ಲಿ ದೀಪ ಹಚ್ಚಿ ದೇವರಿಗೆ ಆರತಿ ಬೆಳಗಿ ಇಷ್ಟಾರ್ಥ ಸಿದ್ದಿಗೆ ಪ್ರಾರ್ಥನೆ ಸಲ್ಲಿಸುತ್ತಿದ್ದರು. ಆದರೆ, ಈ ವರ್ಷ ಭಕ್ತರು ದೇವರ ದರ್ಶನ ಮಾತ್ರ ಅವಕಾಶವಿದೆ. ದೇವಾಲಯದ ಒಳಗಾಗಲೀ ಅಥವಾ ಹೊರಗಾಗಲೀ ದೀಪದಾರತಿ ಮಾಡಲು ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ.

ಭಕ್ತರನ್ನು ನಿಯಂತ್ರಿಸುವ ಸಲುವಾಗಿ ಬ್ಯಾರಿಕೇಡ್ ಹಾಗೂ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಇಲಾಖೆಯಿಂದ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.


bengaluru

LEAVE A REPLY

Please enter your comment!
Please enter your name here