Home ಬೆಂಗಳೂರು ನಗರ ಭೋವಿ ಅಭಿವೃದ್ಧಿ ನಿಗಮ ಹಗರಣ : ವಕೀಲೆ ಆತ್ಮಹತ್ಯೆ ತನಿಖೆ ಸಿಸಿಬಿಗೆ

ಭೋವಿ ಅಭಿವೃದ್ಧಿ ನಿಗಮ ಹಗರಣ : ವಕೀಲೆ ಆತ್ಮಹತ್ಯೆ ತನಿಖೆ ಸಿಸಿಬಿಗೆ

5
0

ಬೆಂಗಳೂರು : ಭೋವಿ ಅಭಿವೃದ್ಧಿ ನಿಗಮದಲ್ಲಿನ ಹಗರಣದ ಕುರಿತು ತನಿಖೆ ಎದುರಿಸುತ್ತಿದ್ದ ವಕೀಲೆ ಎಸ್.ಜೀವಾ (35) ಆತ್ಮಹತ್ಯೆ ಪ್ರಕರಣದ ತನಿಖೆ ಸಿಸಿಬಿಗೆ ವಹಿಸಲಾಗಿದೆ.

ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶ ಹೊರಡಿಸಿದ್ದು, ಸಿಸಿಬಿಯ ಎಸಿಪಿ ಮಟ್ಟದ ಅಧಿಕಾರಿಯ ನೇತೃತ್ವದಲ್ಲಿ ತನಿಖೆಯನ್ನು ರಚಿಸಲಾಗಿದೆ. ಜತೆಗೆ, ಈ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆಯ ದಾಖಲೆಗಳನ್ನು ಹಸ್ತಾಂತರಿಸಲಾಗಿದೆ.

ನಿಗಮದ ಫಲಾನುಭವಿಗಳಿಗೆ ದಾಖಲೆಗಳನ್ನು ಪೂರೈಸುತ್ತಿದ್ದ ಜೀವಾ ಆತ್ಮಹತ್ಯೆಗೆ ಶರಣಾದ ಘಟನೆ ನ. 22ರಂದು ನಡೆದಿತ್ತು. ಆನಂತರ ಜೀವಾ ಸಹೋದರಿ ಸಂಗೀತಾ ನೀಡಿದ್ದ ದೂರಿನನ್ವಯ ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮೀ ವಿರುದ್ಧ ಬನಶಂಕರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮತ್ತೊಂದೆಡೆ, ಜೀವಾ ಆತ್ಮಹತ್ಯೆಯ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ವಕೀಲರ ಸಂಘ ಹೈಕೋರ್ಟ್‌ಗೆ ಮನವಿ ಸಲ್ಲಿಸಿತ್ತು.

ಪ್ರಕರಣ ಗಂಭೀರತೆ ಪಡೆಯುತ್ತಿದ್ದಂತೆ ಎಚ್ಚೆತ್ತ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ತನಿಖೆಯನ್ನು ಸಿಸಿಬಿಗೆ ವಹಿಸಿದ್ದಾರೆ.

LEAVE A REPLY

Please enter your comment!
Please enter your name here