Home High Court/ಹೈಕೋರ್ಟ್ ಭೋವಿ ಅಭಿವೃದ್ಧಿ ನಿಗಮದ ಹಗರಣ | ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಭೋವಿ ಅಭಿವೃದ್ಧಿ ನಿಗಮದ ಹಗರಣ | ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

8
0

ಬೆಂಗಳೂರು : ಭೋವಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಹಗರಣದಲ್ಲಿ ಪೊಲೀಸ್ ತನಿಖೆ ಎದುರಿಸಿದ್ದ ವಕೀಲೆ ಎಸ್.ಜೀವಾ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಬೇಕು ಎಂದು ಕೋರಿ ಸಲ್ಲಿಕೆಯಾದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ಶುಕ್ರವಾರ ತೀರ್ಪು ಪ್ರಕಟಿಸುವುದಾಗಿ ಹೇಳಿದೆ.

ಈ ಕುರಿತಾಗಿ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ಬೆಂಗಳೂರು ವಕೀಲರ ಸಂಘ ಸಲ್ಲಿಸಿದ ಅರ್ಜಿ ಹಾಗೂ ಬನಶಂಕರಿ ಠಾಣಾ ವ್ಯಾಪ್ತಿಯಲ್ಲಿ ತಮ್ಮ ವಿರುದ್ಧ ದಾಖಲಾದ ಪ್ರಕರಣ ರದ್ದು ಕೋರಿ ಆರೋಪಿ ಡಿವೈಎಸ್ಪಿ ಕನಕಲಕ್ಷ್ಮಿ ಅರ್ಜಿ ಸಲ್ಲಿಸಿದ್ದರು.

ಈ ಎರಡು ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಶುಕ್ರವಾರ ತೀರ್ಪು ಪ್ರಕಟಿಸುವುದಾಗಿ ಹೇಳಿದೆ.

LEAVE A REPLY

Please enter your comment!
Please enter your name here