Home ಕರ್ನಾಟಕ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ : ಜೂನ್ 13ಕ್ಕೆ ಮತದಾನ

ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ : ಜೂನ್ 13ಕ್ಕೆ ಮತದಾನ

13
0

ಬೆಂಗಳೂರು : ಕರ್ನಾಟಕ ವಿಧಾನಸಭೆಯ ಸದಸ್ಯರಿಂದ ವಿಧಾನ ಪರಿಷತ್ತಿಗೆ ಆಯ್ಕೆಗೊಂಡ ಹನ್ನೊಂದು ಸದಸ್ಯರು ಜೂನ್ 17ಕ್ಕೆ ನಿವೃತ್ತರಾಗಲಿರುವುದರಿಂದ ಅವರ ಸ್ಥಾನಗಳನ್ನು ತುಂಬಲು ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗವು ದಿನಾಂಕ ಪ್ರಕಟಿಸಿದ್ದು, ಅಧಿಸೂಚನೆ ಹೊರಡಿಸಲಾಗಿದೆ.

ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಜೂ.3ಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನ. ಜೂ. 4ನಾಮಪತ್ರ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಜೂ.6 ಕೊನೆಯ ದಿನವಾಗಿದೆ., ಜೂ.13ರ ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯ ವರೆಗೆ ಮತದಾನ ನಡೆಯಲಿದ್ದು, ಅಂದು ಸಂಜೆ 5 ಗಂಟೆಯಿಂದ ಮತ ಎಣಿಕೆ ಕಾರ್ಯ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟಿಸುವ ಸಾಧ್ಯತೆಗಳಿವೆ ಎಂದು ತಿಳಿಸಲಾಗಿದೆ.

ಚುನಾವಣೆಗೆ ಸ್ಪರ್ಧಿಸಲಿಚ್ಚಿಸುವ ಅಭ್ಯರ್ಥಿಗಳು ಮೇ.27ರಿಂದ ಜೂನ್. 3ರ ವರೆಗೆ ವಿಧಾನಸೌಧದ ಮೊದಲನೆ ಮಹಡಿಯಲ್ಲಿರುವ ವಿಧಾನಸಭಾ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿಯೂ ಆಗಿರುವ ಎಂ.ಕೆ.ವಿಶಾಲಾಕ್ಷಿ ಅಥವಾ ವಿಧಾನಸಭೆಯ ನಿರ್ದೇಶಕ ಹಾಗೂ ಸಹಾಯಕ ಚುನಾವಣಾಧಿಕಾರಿ ಬಿ.ಎಸ್. ಮಹಾಲಿಂಗೇಶ್ ಅವರ ಕಚೇರಿಯಲ್ಲಿ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯ ವರೆಗೆ ನಾಮಪತ್ರ ಸಲ್ಲಿಸಬಹುದಾಗಿದ್ದು, ಜೂ.2ರ ರವಿವಾರ ರಜೆ ಇದ್ದು, ನಾಮಪತ್ರ ಸ್ವೀಕರಿಸುವುದಿಲ್ಲ.

ಪ್ರತಿಯೊಬ್ಬ ಅಭ್ಯರ್ಥಿಯು ತಮ್ಮ ನಾಮಪತ್ರದ ದಸ್ತಾವೇಜನ್ನು ನಿಗದಿತ ನಮೂನೆ 2ಡಿಯಲ್ಲಿ ಸಲ್ಲಿಸಬೇಕು ಮತ್ತು ಅವರ ಉಮೇದುವಾರಿಕೆಗೆ ಸೂಚಕರಾಗಿ ಕನಿಷ್ಠ 10 ಜನ ಹಾಲಿ ಶಾಸಕರು ಸಹಿ ಮಾಡಿರಬೇಕು. ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ನಾಮಪತ್ರದೊಂದಿಗೆ 5ಸಾವಿರ ರೂ.ಗಳನ್ನು ಹಾಗೂ ಇತರ ಅಭ್ಯರ್ಥಿಗಳು 10 ಸಾವಿರ ರೂ.ಗಳನ್ನು ಠೇವಣಿ ಇಡಬೇಕಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here