Home ಸಿನಿಮಾ ಕೊರೊನಾ ಎಫೆಕ್ಟ್: ಎಪ್ಪತ್ತೊಂದನೇ ದಿನದ ನಂತರ ನಾಳೆಯಿಂದ ಬಿಗ್ ಬಾಸ್ ತಾತ್ಕಾಲಿಕವಾಗಿ ಕ್ಲೋಸ್

ಕೊರೊನಾ ಎಫೆಕ್ಟ್: ಎಪ್ಪತ್ತೊಂದನೇ ದಿನದ ನಂತರ ನಾಳೆಯಿಂದ ಬಿಗ್ ಬಾಸ್ ತಾತ್ಕಾಲಿಕವಾಗಿ ಕ್ಲೋಸ್

119
0

ಬೆಂಗಳೂರು:

ಕರುನಾ ವೈರಸ್ ಎಫೆಕ್ಟ್ ದಿಂದಾಗಿ 71ನೇ ಎಪಿಸೋಡ್ ಪ್ರಸಾರವಾದ ನಂತರ ಬಿಗ್ ಬಾಸ್ 8 ನಾಳೆಯಿಂದ ತಾತ್ಕಾಲಿಕವಾಗಿ ಸ್ಥಗಿತಗೊಳ್ಳಲಿದೆ.

ಈ ಬಗ್ಗೆ ಕಲರ್ಸ್ ಕನ್ನಡ ಚಾನೆಲ್ ಬ್ಯುಸಿನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ತಮ್ಮ ಫೇಸ್‍ಬುಕ್‍ನಲ್ಲಿ ಈ ವಿಷಯವನ್ನು ಘೋಷಿಸಿದ್ದಾರೆ.

“ಬಿಗ್ ಬಾಸ್ ಶುರುವಾಗಿ ಇವತ್ತಿಗೆ ಎಪ್ಪತ್ತೊಂದನೇ ದಿನ. ಪಿಸಿಆರ್‍ ನಲ್ಲಿ ನಿಂತು ಈ ಮನೇಲಿರೋ ಹನ್ನೊಂದು ಜನ ಓಡಾಡುತ್ತಿರುವುದನ್ನು ನೋಡಿದಾಗ ಒಂದಕ್ಕಿಂತ ಹೆಚ್ಚು ಭಾವನೆಗಳು ಒಂದೇ ಸಲಕ್ಕೆ ಬಂದು ಮನಸ್ಸಿಗೆ ವಿಚಿತ್ರವಾದ ತಳಮಳ. ಹೊರಗಡೆ ಎದುರಾಗಿರುವ ಕಷ್ಟದ ಸವಾಲು ಗೊತ್ತಿಲ್ಲದೇ ಒಳಗಡೆ ಇರುವವರೆಲ್ಲಾ ಖುಷಿಯಾಗಿದ್ದಾರೆ. ಐಸೋಲೇಷನ್ನಿನಲ್ಲಿ ಇರುವುದರಿಂದ ಸುರಕ್ಷಿತವಾಗಿಯೂ ಇದ್ದಾರೆ. ಎಲ್ಲರಿಗೂ ಹೊರಗಡೆ ಆಗಿರುವ ಬೆಳವಣಿಗೆ ತಿಳಿಸಿ ನಾಳೆ ಹೊರಗಡೆ ಕರೆಯುತ್ತಿದ್ದೇವೆ. ಅನಂತರ ಅವರನ್ನು ಮತ್ತು ತಂಡವನ್ನು ಸುರಕ್ಷಿತವಾಗಿ ಮನೆಗೆ ಕಳುಹಿಸಲು ವ್ಯವಸ್ಥೆ ಆಗುತ್ತಿದೆ.


…ನೂರಾರು ದಿನಗಳ ಕೆಲಸ. ನೂರಾರು ಜನರ ಕೆಲಸ. ಎಲ್ಲವನ್ನೂ ಪಕ್ಕಕ್ಕಿಟ್ಟು ಶ್ರದ್ಧೆಯಿಂದ ಕೆಲಸ ಮಾಡಿದ ಒಂದು ತಂಡದ ಕನಸು ಅರ್ಧಕ್ಕೇ ನಿಂತಿದೆ. ಕಷ್ಟದ ತೀರ್ಮಾನವಾದರೂ ಸಮಾಧಾನ ಕೊಟ್ಟ ತೀರ್ಮಾನ…”

…ಮನಸ್ಸು ಭಾರವಾಗಿದೆ. ಈ ಶೋ ನಿಲ್ಲುತ್ತಿದೆ ಅಂತಲ್ಲ. ಹೊರಗಡೆ ಗಾಳಿಯಲ್ಲಿ ಓಡಾಡುತ್ತಿರುವ ಕಣ್ಣಿಗೆ ಕಾಣದ ಅನಿಶ್ಚಿತತೆಯಿಂದ ಇನ್ನಿಲ್ಲದ ಕಳವಳ,”

…ಎಲ್ಲರಿಗೂ ಈ ಕಳವಳಕ್ಕೊಂದು ಉತ್ತರ ಬೇಗ ಸಿಗಲಿ. ಸುರಕ್ಷಿತವಾಗಿರಿ,” ಎಂದು ಪರಮೇಶ್ವರ್ ಗುಂಡ್ಕಲ್ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here