ಬೆಂಗಳೂರು:
24 ಶಾಸಕರು ಇಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ, ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ ಎನ್ನುವಂತ ಖಾತೆ ಹಂಚಿಕೆ ಪಟ್ಟಿಯೊಂದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿತ್ತು. ಈ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಿಂದ ಇದು ನಕಲಿ ಪಟ್ಟಿಯೆಂಬುದಾಗಿ ಸ್ಪಷ್ಟ ಪಡಿಸಿದೆ.

ಈ ಬಗ್ಗೆ ಟ್ವಿಟ್ ಮಾಡಿರುವಂತ ಕರ್ನಾಟಕ ಕಾಂಗ್ರೆಸ್, ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಖಾತೆ ಹಂಚಿಕೆಯಾಗಿರುವ ಬಗ್ಗೆ ನಕಲಿ ಪಟ್ಟಿ ವೈರಲ್ ಆಗಿದೆ. ಇನ್ನೂ ಸಹ ಖಾತೆ ಹಂಚಿಕೆಯಾಗಿರುವುದಿಲ್ಲ, ಯಾರೂ ಸಹ ಊಹಾಪೋಹಗಳಿಗೆ ಕಿವಿಗೊಡಬೇಡಿ ಹಾಗೂ ನಕಲಿ ಸುದ್ದಿಗಳನ್ನು ಹಂಚಬೇಡಿ. ಸರ್ಕಾರ ಅಧಿಕೃತವಾಗಿ ಖಾತೆ ಹಂಚಿಕೆಯ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ ಎಂಬುದಾಗಿ ತಿಳಿಸಿದೆ.