ದೊಡ್ಮನೆಗೆ ಮತ್ತೊಂದು ಸಲ ಒಳ್ಳೆಯ ಹುಡುಗ ಪ್ರಥಮ್ (Pratham) ಎಂಟ್ರಿ ಕೊಟ್ಟಿದ್ದಾರೆ. ಬಿಗ್ ಬಾಸ್ ಸೀಸನ್ 4ರಲ್ಲಿ ಕಂಟೆಸ್ಟೆಂಟ್ ಆಗಿ ಹೋದವರು, ಟ್ರೋಫಿ ಗೆದ್ದುಕೊಂಡು ಹೊರ ಬಂದರು. ಇದೀಗ ಪ್ರಥಮ್ ಟಾಸ್ಕ್ ಆಡಿಸುವುದಕ್ಕಾಗಿ ಮನೆ ಒಳಗೆ ಎಂಟ್ರಿ ಕೊಟ್ಟಿದ್ದಾರೆ. ಲಾರ್ಡ್ ಪ್ರಥಮ್ ಹೆಸರಿನಲ್ಲಿ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದಾರೆ. ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡುತ್ತಲೇ ಗತ್ತಿನ ಮಾತುಗಳಿಂದ ಒಂದು ರೀತಿಯಲ್ಲಿ ಕುತೂಹಲ ಮೂಡಿಸಿದ್ದಾರೆ.
ದೊಡ್ಮನೆಯ ಆಟ ಜೋರಾಗಿದೆ. ದಿನದಿಂದ ದಿನಕ್ಕೆ ಮನೆಯ ರಂಗು ಬದಲಾಗುತ್ತಿದೆ. ಈಗ ಮನೆಯ ಅಸಲಿ ಆಟ ಶುರುವಾಗಿದೆ. ಬಿಗ್ ಮನೆಗೆ ಗನ್‌ಮ್ಯಾನ್‌ಗಳು ದಿಢೀರ್ ಎಂದು ಎಂಟ್ರಿ ಕೊಟ್ಟಿದ್ದಾರೆ. ಗನ್ ಮ್ಯಾನ್‌ಗಳ ಎಂಟ್ರಿ ನೋಡಿ ಮನೆಮಂದಿ ಶಾಕ್ ಆಗಿದ್ದಾರೆ.
ಅಕ್ಟೋಬರ್ 9ರ ಎಪಿಸೋಡ್‌ನಲ್ಲಿ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಅವರು ಆಗಮಿಸುವ ಮೂಲಕ ಅಚ್ಚರಿ ಮೂಡಿಸಿದ್ದರು. ಬಿಗ್ ಮನೆಯಲ್ಲಿ 3 ಗಂಟೆಗಳ ಕಾಲ ಕಳೆಯುವ ಮೂಲಕ ಸ್ಪರ್ಧಿಗಳಿಗೆ ಸ್ಪೂರ್ತಿ ತುಂಬಿದ್ದರು. ಪ್ರದೀಪ್ ಈಶ್ವರ್ ಅವರ ಎಂಟ್ರಿಗೆ ರಾಜಕೀಯ ರಂಗದಲ್ಲಿ (Politics) ಕೋಲಾಹಲ ಎಬ್ಬಿಸಿದ್ದರೂ ಕೂಡ ಪ್ರೇಕ್ಷಕರಿಗೆ ಮನರಂಜನೆ ನೀಡಿತ್ತು.
The post Bigg Boss Kannda: ದೊಡ್ಮನೆಗೆ ಮತ್ತೊಂದು ಸಲ ಒಳ್ಳೆ ಹುಡುಗ ಪ್ರಥಮ್ ಎಂಟ್ರಿ: ಲಾರ್ಡ್ ರೀತಿ ವಿಸಿಟ್! appeared first on Ain Live News.