Home ಬೆಂಗಳೂರು ನಗರ ಬೆಂಗಳೂರಿನಲ್ಲಿ ಬೈಕ್ ಅಪಘಾತ: ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಾವು

ಬೆಂಗಳೂರಿನಲ್ಲಿ ಬೈಕ್ ಅಪಘಾತ: ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಾವು

28
0

ಬೆಂಗಳೂರು: ನಗರದ ಕುಮಾರಸ್ವಾಮಿ ಲೇಔಟ್ ಬಳಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಬಲಿಯಾಗಿರುವ ಘಟನೆ ನಡೆದಿದೆ.

ಮೃತರನ್ನು ಮನೋಜ್, ಮತ್ತು ಹೃತ್ವಿಕ್ ಎನ್ನಲಾಗಿದೆ. ಮೃತರಿಬ್ಬರು ಕಾಲೇಜ್ ನಿಂದ ಯಮಹಾ ಬೈಕ್ ನಲ್ಲಿ ಹೊರಟಿದ್ದರು. ಈ ವೇಳೆ ನಿಯಂತ್ರಣ ತಪ್ಪಿದ ಬೈಕ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಕುಸಿದು ಬಿದ್ದಿದ್ದಾರೆ.

ಕೂಡಲೇ ಇಬ್ಬರನ್ನ ಖಾಸಗಿ ಆಸ್ಪತ್ರೆಗೆ ಸ್ಥಳೀಯರು, ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಮೃತಪಟ್ಟಿದ್ದಾರೆ.

LEAVE A REPLY

Please enter your comment!
Please enter your name here