ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರಿಗೆ 42ನೇ ಎಸಿಜಿಎಂ ಕೋರ್ಟ್ ಫೆಬ್ರವರಿ 26ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಇದರಿಂದ ಅವರು ಫೆ.26ರವರೆಗೆ ಜೈಲಲ್ಲೇ ಇರಬೇಕಾಗಿದೆ.
ಪ್ರಕರಣದಲ್ಲಿ ತಮ್ಮಿಗೆ ಯಾವುದೇ ಸಂಬಂಧ ಇಲ್ಲ ಎಂದು ಬೈರತಿ ಬಸವರಾಜ್ ವಾದಿಸುತ್ತಿದ್ದರೂ, ತನಿಖೆಯಲ್ಲಿ ದಾಖಲಾಗಿರುವ ಹೇಳಿಕೆಗಳು ಮತ್ತು ಇತರೆ ಸಾಕ್ಷ್ಯಾಧಾರಗಳ ಆಧಾರದ ಮೇಲೆ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಕೆಲ ದಿನಗಳ ಕಾಲ ಪೊಲೀಸರು ಹುಡುಕಾಟ ನಡೆಸಿದ ಬಳಿಕ ಬೈರತಿ ಬಸವರಾಜ್ ಅವರು ಅಧಿಕಾರಿಗಳ ಮುಂದೆ ಶರಣಾಗತರಾದರು. ಶರಣಾಗತಿ ಬಳಿಕವೂ ಪೊಲೀಸರು ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದೆ.
ಒಬ್ಬ ಹಾಲಿ ಶಾಸಕರಿಗೆ ನ್ಯಾಯಾಂಗ ಬಂಧನ ವಿಧಿಸಿರುವುದು ರಾಜ್ಯ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಬಿಕ್ಲು ಶಿವ ಹತ್ಯೆ ಪ್ರಕರಣದ ತನಿಖೆ ಮುಂದುವರಿದಿದ್ದು, ಮುಂದಿನ ವಿಚಾರಣೆ ಫೆಬ್ರವರಿ 26ರಂದು ನಡೆಯಲಿದೆ.
