ಬೆಂಗಳೂರು : ರಾಜ್ಯಾದ್ಯಂತ ತೀವ್ರ ಸದ್ದು ಮಾಡಿದ್ದ ಬಿಟ್ ಕಾಯಿನ್ ಹಗರಣದ ಪ್ರಮುಖ ಆರೋಪಿ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯನ್ನು ವಿಶೇಷ ತನಿಖಾ ದಳದ (ಎಸ್‌ಐಟಿ) ಅಧಿಕಾರಿಗಳು ಬಂಧಿಸಿರುವುದಾಗಿ ವರದಿಯಾಗಿದೆ.
2017ರಂದು ತುಮಕೂರಿನ ಉನೊ ಕಾಯಿನ್ ಕಂಪನಿಯ ಸರ್ವರ್‌ನಲ್ಲಿದ್ದ 60.6 ಬಿಟ್ ಕಾಯಿನ್‌ಗಳು ಕಳ್ಳತವಾಗಿದ್ದವು. ಈ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಶ್ರೀಕಿಗೆ ನೋಟಿಸ್ ನೀಡಲಾಗಿತ್ತು. ಆದರೆ, ಶ್ರೀಕಿ ಗೈರಾಗಿದ್ದ. ಇದೇ ಕಾರಣಕ್ಕೆ ಆತನನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಬಿಟ್ ಕಾಯಿನ್ ಕಳ್ಳತನಕ್ಕೆ ಸಂಬಂಧಿಸಿದಂತೆ ಕಂಪನಿಯ ಸಹ ಸಂಸ್ಥಾಪಕ ಬಿ.ವಿ.ಹರೀಶ್ ಅವರು ತುಮಕೂರಿನ ಸೆನ್ (ಸೈಬರ್ ಆರ್ಥಿಕ ಹಾಗೂ ಮಾದಕ ದ್ರವ್ಯ ನಿಯಂತ್ರಣ) ಠಾಣೆಗೆ ದೂರು ನೀಡಿದ್ದರು. ಈ ಪ್ರಕರಣದ ತನಿಖೆಯನ್ನು ಎಸ್‌ಐಟಿಗೆ ವಹಿಸಲಾಗಿತ್ತು.