Home High Court/ಹೈಕೋರ್ಟ್ Bitcoin: Karnataka High Court dismisses DSP Sridhar Pujari’s bail plea | ಬಿಟ್​​...

Bitcoin: Karnataka High Court dismisses DSP Sridhar Pujari’s bail plea | ಬಿಟ್​​ ಕಾಯಿನ್​ ಪ್ರಕರಣದಲ್ಲಿ ಡಿವೈಎಸ್‌ಪಿ ಶ್ರೀಧರ್ ಪೂಜಾರಿ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

68
0

ಬೆಂಗಳೂರು : ಬಿಟ್ ಕಾಯಿನ್ ಪ್ರಕರಣದಲ್ಲಿ ಅಕ್ರಮ ಎಸಗಿದ ಆರೋಪ ಎದುರಿಸುತ್ತಿರುವ ಡಿವೈಎಸ್‌ಪಿ ಶ್ರೀಧರ್ ಪೂಜಾರಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಸಿಸಿಬಿ ತನಿಖೆ ವೇಳೆ ಟೀಂನಲ್ಲಿದ್ದ ಶ್ರೀಧರ್ ಪೂಜಾರಿ ಅಕ್ರಮ ಎಸಗಿರುವ ಆರೋಪ ಕೇಳಿಬಂದಿತ್ತು.

ಈ ಸಂಬಂಧ ಎಸ್‌ಐಟಿ ತಂಡ ಬಂಧಿಸಲು ಮುಂದಾದಾಗ ಅಧಿಕಾರಿಗಳ ಮೇಲೆ ಕಾರು ಹತ್ತಿಸಲು ಯತ್ನಿಸಿ ಶ್ರೀಧರ್ ಪರಾರಿಯಾಗಿದ್ದರು.

ಪ್ರಕರಣ ಸಂಬಂಧ ಅರ್ಜಿದಾರರ ವಿರುದ್ಧ ವಿಧಾನಸೌಧ ಪೊಲೀಸರು ಐಪಿಸಿ ಸೆಕ್ಷನ್ 307 ಅಡಿ (ಕೊಲೆ ಯತ್ನ) ಮತ್ತು 353 ಸರಕಾರಿ ಕರ್ತವ್ಯಕ್ಕೆ ಅಡ್ಡಿ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು.

ಎಸ್‌ಐಟಿ ಫೆ.17 ರಂದು ಶ್ರೀಧರ್ ಪೂಜಾರಿ ಬಂಧನಕ್ಕೆ ಮುಂದಾಗಿತ್ತು. ಇದೀಗ ಅರ್ಜಿದಾರರು ತೆರೆಮರೆಯಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಪೀಠ ಅರ್ಜಿಯನ್ನು ವಜಾಗೊಳಿಸಿದೆ.

LEAVE A REPLY

Please enter your comment!
Please enter your name here