Threats to Karnataka High Court Justices: Two separate cases registered in Vidhana Soudha Police Station | ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬೆದರಿಕೆ ಕರೆ: ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಎರಡು ಪ್ರಕರಣ ದಾಖಲು
ಬೆಂಗಳೂರು : ಬಿಟ್ ಕಾಯಿನ್ ಪ್ರಕರಣದಲ್ಲಿ ಅಕ್ರಮ ಎಸಗಿದ ಆರೋಪ ಎದುರಿಸುತ್ತಿರುವ ಡಿವೈಎಸ್ಪಿ ಶ್ರೀಧರ್ ಪೂಜಾರಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಸಿಸಿಬಿ ತನಿಖೆ ವೇಳೆ ಟೀಂನಲ್ಲಿದ್ದ ಶ್ರೀಧರ್ ಪೂಜಾರಿ ಅಕ್ರಮ ಎಸಗಿರುವ ಆರೋಪ ಕೇಳಿಬಂದಿತ್ತು.
ಈ ಸಂಬಂಧ ಎಸ್ಐಟಿ ತಂಡ ಬಂಧಿಸಲು ಮುಂದಾದಾಗ ಅಧಿಕಾರಿಗಳ ಮೇಲೆ ಕಾರು ಹತ್ತಿಸಲು ಯತ್ನಿಸಿ ಶ್ರೀಧರ್ ಪರಾರಿಯಾಗಿದ್ದರು.
ಪ್ರಕರಣ ಸಂಬಂಧ ಅರ್ಜಿದಾರರ ವಿರುದ್ಧ ವಿಧಾನಸೌಧ ಪೊಲೀಸರು ಐಪಿಸಿ ಸೆಕ್ಷನ್ 307 ಅಡಿ (ಕೊಲೆ ಯತ್ನ) ಮತ್ತು 353 ಸರಕಾರಿ ಕರ್ತವ್ಯಕ್ಕೆ ಅಡ್ಡಿ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು.
ಎಸ್ಐಟಿ ಫೆ.17 ರಂದು ಶ್ರೀಧರ್ ಪೂಜಾರಿ ಬಂಧನಕ್ಕೆ ಮುಂದಾಗಿತ್ತು. ಇದೀಗ ಅರ್ಜಿದಾರರು ತೆರೆಮರೆಯಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಪೀಠ ಅರ್ಜಿಯನ್ನು ವಜಾಗೊಳಿಸಿದೆ.
