Home ಬೆಂಗಳೂರು ನಗರ ಬಿಟ್ ಕಾಯಿನ್ : ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಕ್ರಮಕ್ಕೆ ಮುಂದಾದ ಎಸ್‍ಐಟಿ

ಬಿಟ್ ಕಾಯಿನ್ : ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಕ್ರಮಕ್ಕೆ ಮುಂದಾದ ಎಸ್‍ಐಟಿ

34
0

ಬೆಂಗಳೂರು : ಬಿಟ್ ಕಾಯಿನ್ ಹಗರಣ ಪ್ರಕರಣದ ಇಬ್ಬರು ಆರೋಪಿಗಳ ವಿರುದ್ಧ ಕೋಕಾ (ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ) ಅಡಿ ಎಸ್‍ಐಟಿ ಅಧಿಕಾರಿಗಳು ಕ್ರಮ ಕೈಗೊಂಡಿರುವುದಾಗಿ ವರದಿಯಾಗಿದೆ.

2017ರಲ್ಲಿ ತುಮಕೂರು ಸಿಇಎನ್ ಠಾಣೆಯಲ್ಲಿ ದಾಖಲಾಗಿದ್ದ ಯುನೋ ಕಾಯಿನ್ ಕಳ್ಳತನ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‍ಐಟಿ ತಂಡ, ಆರೋಪಿಗಳಾದ ಶ್ರೀಕೃಷ್ಣ ಯಾನೆ ಶ್ರೀಕಿ ಹಾಗೂ ರಾಬಿನ್ ಖಂಡೇವಾಲಾನನ್ನು ಕೋಕಾ ಕಾಯ್ದೆಯಡಿ ಜೈಲಿಗಟ್ಟಲು ಸಿದ್ಧತೆ ಮಾಡಿಕೊಂಡಿದೆ ಎಂದು ತಿಳಿದು ಬಂದಿದೆ.

ಬಿಟ್ ಕಾಯಿನ್ ಅಕ್ರಮ ಪ್ರಕರಣದಲ್ಲಿ ಎಸ್‍ಐಟಿ ತನಿಖೆಗೆ ಹಾಜರಾಗದೆ ಪರಾರಿಯಾಗಿದ್ದ ಶ್ರೀಕಿಯನ್ನು ಮೇ 7ರಂದು ಎಸ್‍ಐಟಿ ಅಧಿಕಾರಿಗಳು ಬಂಧಿಸಿದ್ದರು. ಬಳಿಕ ಆತನ ಸಹವರ್ತಿ ರಾಬಿನ್ ಖಂಡೇವಾಲಾನನ್ನು ರಾಜಸ್ಥಾನದಲ್ಲಿ ಎಸ್‍ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಇದೀಗ ಇಬ್ಬರು ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಕ್ರಮ ಕೈಗೊಂಡು, ಜೈಲಿ ಕಳುಹಿಸಲು ಮುಂದಾಗಿದ್ದಾರೆ ಎಂದು ಎಸ್‍ಐಟಿ ಮೂಲಗಳು ತಿಳಿಸಿವೆ.

ಕೋಕಾ ಕಾಯ್ದೆಯೆಂದರೆ?: ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ ಹೆಸರೇ ಸೂಚಿಸುವಂತೆ ಪದೇ ಪದೇ ಸಂಘಟಿತ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವ ಆರೋಪಿಗಳನ್ನು ಈ ಕಾಯ್ದೆಯಡಿ ಬಂಧನಕ್ಕೊಳಪಡಿಸಬಹುದು. ಕೋಕಾ ಕಾಯ್ದೆಯಡಿ ಬಂಧಿಸಲ್ಪಡುವ ಅಪರಾಧಿಗೆ ಕನಿಷ್ಠ ಒಂದು ವರ್ಷ ಜಾಮೀನು ಸಿಗುವುದಿಲ್ಲ.

LEAVE A REPLY

Please enter your comment!
Please enter your name here