Home ರಾಜಕೀಯ ಬಿಜೆಪಿಯವರು ವಿದ್ಯುತ್ ದುರುಪಯೋಗಪಡಿಸಿಕೊಳ್ಳಲು ಜನರನ್ನು ಪ್ರೋತ್ಸಾಹಿಸುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಬಿಜೆಪಿಯವರು ವಿದ್ಯುತ್ ದುರುಪಯೋಗಪಡಿಸಿಕೊಳ್ಳಲು ಜನರನ್ನು ಪ್ರೋತ್ಸಾಹಿಸುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

61
0
BJP encouraging people to waste and misuse electricity: CM Siddaramaiah
BJP encouraging people to waste and misuse electricity: CM Siddaramaiah

ನೀರು, ಗಾಳಿ, ವಿದ್ಯುತ್ ವ್ಯರ್ಥ ಮಾಡಬಾರದು

ಬೆಂಗಳೂರು:

‘ಮನುಷ್ಯ ಪ್ರಕೃತಿಯ ಅವಿಭಾಜ್ಯ ಅಂಗ. ಪ್ರಕೃತಿಯ ನಾಶವೇ ನಮ್ಮ ವಿನಾಶ. ಹೀಗಾಗಿ ಪ್ರಕೃತಿಯೊಂದಿಗೆ ಬೆಳೆದು ಬದುಕಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅವರು ಇಂದು ವಿಶ್ವ ಪರಿಸರ ದಿನಾಚರಣೆ-2023 ಉದ್ಘಾಟಿಸಿ ಮತ್ತು ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಸಂಕಷ್ಟದಲ್ಲಿರುವ ರಾಜ್ಯದ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಸಹಾಯ ಮಾಡಲು ನಾವು ಉಚಿತ ವಿದ್ಯುತ್ ನೀಡುತ್ತಿದ್ದೇವೆ. ಒಂದು ವರ್ಷದ ಸರಾಸರಿ ಬಳಕೆಗಿಂತ ಶೇ.10ರಷ್ಟು ಉಚಿತ ವಿದ್ಯುತ್ ಬಳಕೆಗೆ ಅವಕಾಶ ನೀಡಿದ್ದೇವೆ. ಇದನ್ನು ರಾಜ್ಯದ ಜನತೆ ಒಪ್ಪಿಕೊಂಡು ಸ್ವಾಗತಿಸಿದ್ದಾರೆ ಎಂದರು.

ಆದರೆ ಜನರಿಂದ ತಿರಸ್ಕೃತಗೊಂಡಿರುವ ಬಿಜೆಪಿ ವಿದ್ಯುತ್ ದುರ್ಬಳಕೆ ಹಾಗೂ ದುಂದುವೆಚ್ಚಕ್ಕೆ ಪ್ರಚೋದನೆ ನೀಡುತ್ತಿದೆ. ಇದು ಜನವಿರೋಧಿ ನಡೆ ಎಂದು ಸಿಎಂ ಹೇಳಿದ್ದಾರೆ. ರಾಜ್ಯದ ಪ್ರಜ್ಞಾವಂತರು ಇದಕ್ಕೆ ಮಣಿಯುವುದಿಲ್ಲ ಎಂಬ ಭರವಸೆ ನಮಗಿದೆ ಎಂದರು.

ಪರಿಸರ ಸಂರಕ್ಷಣೆ, ಕೃಷಿ ಮತ್ತು ಅರಣ್ಯ ಬೆಳೆಸುವುದು ಅರಣ್ಯ ಇಲಾಖೆಯ ಕರ್ತವ್ಯ ಮಾತ್ರವಲ್ಲ, ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಪ್ರಕೃತಿಯ ಸದುಪಯೋಗ ಪಡೆಯುತ್ತಿರುವ ಪ್ರತಿಯೊಬ್ಬರಿಗೂ ಪ್ರಕೃತಿಯನ್ನು ಉಳಿಸುವ ಹೊಣೆಗಾರಿಕೆ ಇದೆ ಎಂದರು.

LEAVE A REPLY

Please enter your comment!
Please enter your name here