Karnataka BJP: ರಾಜ್ಯ ಕಾರ್ಯಾಲಯದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷರಿಗೆ ಅಭಿನಂದನ
ಬೆಂಗಳೂರು: ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪಕ್ಷದ ನೂತನ ಜಿಲ್ಲಾಧ್ಯಕ್ಷರ ಅಭಿನಂದನಾ ಸಮಾರಂಭ ನೆರವೇರಿತು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಜಿಲ್ಲಾ ಅಧ್ಯಕ್ಷರನ್ನು ಅಭಿನಂದಿಸಿದರಲ್ಲದೆ, ವಿಶೇಷ ಸಭೆಯಲ್ಲಿ ಪಾಲ್ಗೊಂಡರು.
ಮಾಜಿ ಸಚಿವ ಸಿ.ಟಿ. ರವಿ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪಿ. ರಾಜೀವ್, ನಂದೀಶ್ ರೆಡ್ಡಿ, ಪ್ರೀತಮ್ ಗೌಡ, ಪಕ್ಷದ ಚುನಾವಣಾ ಸಂಚಾಲಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ರಾಜ್ಯ ಪದಾಧಿಕಾರಿಗಳು ಮತ್ತು ಎಲ್ಲ ನೂತನ ಜಿಲ್ಲಾಧ್ಯಕ್ಷರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
