Home ಮಂಡ್ಯ ಮಂಡ್ಯಕ್ಕೆ ಹೆಚ್ಚಿನ ಅನುದಾನ ನೀಡಿದ್ದು ನಮ್ಮ ಬಿಜೆಪಿ ಸರ್ಕಾರ: ಸಚಿವ ಡಾ.ನಾರಾಯಣಗೌಡ

ಮಂಡ್ಯಕ್ಕೆ ಹೆಚ್ಚಿನ ಅನುದಾನ ನೀಡಿದ್ದು ನಮ್ಮ ಬಿಜೆಪಿ ಸರ್ಕಾರ: ಸಚಿವ ಡಾ.ನಾರಾಯಣಗೌಡ

10
0
BJP government has given Most grants to Mandya: Minister Narayana Gowda
bengaluru

ಮಂಡ್ಯ:

ಕೆಲವರು ಚುನಾವಣೆ ಭಾಷಣದಲ್ಲಿ 7-8 ಸಾವಿರ ಅನುದಾನ ನೀಡಿದ್ದೇವೆ ಎಂದು ಸುಳ್ಳು ಹೇಳಿದ್ರು. ಆದರೆ ನಿಜವಾಗಿಯೂ ಮಂಡ್ಯ ಜಿಲ್ಲೆಗೆ ಅನುದಾನ ನೀಡಿದ್ದು ನಮ್ಮ ಬಿಜೆಪಿ ಸರ್ಕಾರ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.

ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮದ್ದೂರಿನಲ್ಲಿ ನಡೆದ ಬಿಜೆಪಿ ಕಾರ್ಯಕರ್ತರು ಹಾಗೂ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಸಾರ್ವಜನಿಕ ಸಭೆಯಲ್ಲಿ ಸಚಿವ ಡಾ.ನಾರಾಯಣಗೌಡ ಅವರು ಪಾಲ್ಗೊಂಡಿದ್ದರು.

ಬಿಜೆಪಿ ಸರ್ಕಾರ ಬಂದ ಮೇಲೆ ಮಂಡ್ಯ ಜಿಲ್ಲೆಗೆ ಮೂರೂವರೆ ಸಾವಿರ ಕೋಟಿಗೂ ಹೆಚ್ಚಿನ ಅನುದಾನ ನೀಡಲಾಗಿದೆ. ವಿರೋಧ ಪಕ್ಷಗಳಿಗೆ ಬಿಜೆಪಿ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ ಎಂದು ಸಚಿವ ಡಾ.ನಾರಾಯಣಗೌಡ ಅವರು ಕಿಡಿಕಾರಿದರು.

bengaluru

ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಜು ಅವರನ್ನ ಗೆಲ್ಲಿಸಿದರೇ ಮತ್ತಷ್ಟು ಶಕ್ತಿ ಬರಲಿದೆ, ಜಿಲ್ಲೆಗೆ ಇನ್ನಷ್ಟು ಹೆಚ್ಚಿನ ಅನುದಾನ ತರಲು ಶಕ್ತಿ ಬರಲಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.

ಬಿಜೆಪಿ ಅಭ್ಯರ್ಥಿ ಬೂಕಹಳ್ಳಿ ಮಂಜು, ಕಾರ್ಯಕಾರಿಣಿ ಸದಸ್ಯ ಸಿದ್ದರಾಮಯ್ಯ ಸೇರಿದಂತೆ ಬಿಜೆಪಿಯ ಮುಖಂಡರು ಉಪಸ್ಥಿತರಿದ್ದರು.

bengaluru

LEAVE A REPLY

Please enter your comment!
Please enter your name here