ಬೆಂಗಳೂರು:
ಬಿಜೆಪಿ ಸರ್ಕಾರದ ಅಧಿಕಾರದಲ್ಲಿದ್ದಾಗ ಆರ್.ಎಸ್.ಎಸ್ ಮತ್ತು ತಮ್ಮ ಸಂಸ್ಥೆಗೆ ಸರ್ಕಾರಿ ಭೂಮಿ ಪರಭಾರೆ ಮಾಡಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂ ರಾವ್ ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ರಾಜ್ಯದ ನೂರಾರು ಎಕರೆ ಸರ್ಕಾರಿ ಜಾಗವನ್ನು ಆರ್.ಎಸ್.ಎಸ್ ಸೇರಿದಂತೆ ತಮ್ಮ ಸಂಸ್ಥೆಗಳಿಗೆ ನೀಡಿದ್ದಾರೆ. ತಮ್ಮ ಪಕ್ಷ ಹಾಗೂ ಪಕ್ಷದ ಸಿದ್ಧಾಂತ ಬೆಳವಣಿಗೆಗೆ ಹೀಗೆ ಮಾಡಿದ್ದು, ಕಾನೂನು ಉಲ್ಲಂಘಿಸಿ ಭೂಮಿ ನೀಡಿರುವುದರ ಕುರಿತು ಸಿಎಂ ಹಾಗೂ ಕಂದಾಯ ಇಲಾಖೆ ಪರಿಶೀಲನೆ ನಡೆಸಲಿದೆ ಎಂದರು.
ಬಿಜೆಪಿಯವರು ಇತಿಹಾಸ ತಿರುಚುವ ಕೆಲಸ ಮಾಡಿದ್ದಾರೆ. ಅಧಿಕಾರದಲ್ಲಿದ್ದಾಗ ದ್ವೇಷ ಬಿತ್ತುವ ಕೆಲಸ ಮಾಡುತ್ತಿದ್ದರು. ಇದೇ ಕಾರಣಕ್ಕೆ ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿದ್ದರು ಎಂದು ಬಿಜೆಪಿ ವಿರುದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಪಗಳ ಸುರಿಮಳೆ ಸುರಿಸಿದ್ದಾರೆ.
“ಸಂಘ ಪರಿವಾರಕ್ಕೆ ಸೇರಿದ ಅನೇಕ ಸಂಸ್ಥೆಗಳಿಗೆ ಸಾಕಷ್ಟು ಸರ್ಕಾರಿ ಆಸ್ತಿಗಳನ್ನು ಹಸ್ತಾಂತರಿಸಲಾಗಿದೆ, ಆದ್ದರಿಂದ, ನಾವು ಎಲ್ಲಾ ವಿಷಯಗಳನ್ನು ನೋಡಬೇಕು, ಅವುಗಳನ್ನು ಸರಿಯಾಗಿ, ಕಾನೂನುಬದ್ಧವಾಗಿ ಮಾಡಲಾಗಿದೆಯೇ ಎಂದು ನೋಡಬೇಕು. ಆ ವಿಷಯಗಳಲ್ಲಿ ನಾವು ಏನು ಮಾಡಬಹುದು ಎಂದು ನೋಡುತ್ತಿದ್ದೇವೆ. ಆದರೆ ಖಂಡಿತವಾಗಿಯೂ, ಆರೆಸ್ಸೆಸ್ ಮತ್ತು ಬಿಜೆಪಿಗೆ ನಿಕಟ ಸಂಪರ್ಕ ಹೊಂದಿರುವ ಸಂಸ್ಥೆಗಳು ಮತ್ತು ಸಂಸ್ಥೆಗಳಿಗೆ ಸಾಕಷ್ಟು ರಾಜ್ಯ ಸರ್ಕಾರದ ಆಸ್ತಿಗಳನ್ನು ನೀಡಲಾಗಿದೆ ಎಂದರು.
ಇದೇ ವೇಳೆ ಪಠ್ಯ ಪುಸ್ತಕ ಪರಿಷ್ಕರಣೆ ಕುರಿತು ಮಾತನಾಡಿದ ಅರು, ‘ನಾವು ರಾಷ್ಟ್ರ ನಿರ್ಮಾಣಕ್ಕೆ ನಿಜವಾಗಿಯೂ ಕೊಡುಗೆ ನೀಡಿದ ಜನರ ಕಥೆಗಳನ್ನು ಹೊಂದಿರಬೇಕು. ನೀವು ಸ್ವಾತಂತ್ರ್ಯ ಹೋರಾಟದ ಬಗ್ಗೆ ಮಾತನಾಡಿದರೆ, ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದವರು – ಇತಿಹಾಸವು ಅದನ್ನು ಪ್ರತಿಬಿಂಬಿಸಬೇಕೇ ಹೊರತು ನಿಮ್ಮ ವೈಯಕ್ತಿಕ ಆಯ್ಕೆಗಳಲ್ಲ, ನೀವು ಯಾರನ್ನು ಆರಾಧಿಸುತ್ತೀರಿ. ತಮ್ಮ ಸೈದ್ಧಾಂತಿಕ ವಿಚಾರಗಳನ್ನು ಪಠ್ಯಪುಸ್ತಕಗಳಲ್ಲಿ ತುಂಬಲು ಪ್ರಯತ್ನಿಸಿದ್ದು ಸರಿಯಲ್ಲ… ಆದ್ದರಿಂದ ಕಾಂಗ್ರೆಸ್ ಪಕ್ಷವು ಇದನ್ನು ಗಂಭೀರವಾಗಿ ಪರಿಗಣಿಸಿ ಸರಿಪಡಿಸುವ ಕ್ರಮಗಳನ್ನು ತೆಗೆದುಕೊಳ್ಳಬೇಕು..” ಎಂದು ಕರ್ನಾಟಕ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಪ್ರಮುಖವಾಗಿ ಕೆಬಿ ಹೆಡಗೇವಾರ್ ಅವರನ್ನೂ ಒಳಗೊಂಡಂತೆ ಹಿಂದಿನ ಬಿಜೆಪಿ ಸರ್ಕಾರವು ಪರಿಚಯಿಸಿದ ಪಠ್ಯಪುಸ್ತಕಗಳಿಂದ ಕೆಲವು ಪಾಠಗಳನ್ನು ತೆಗೆದುಹಾಕಲು ಕಾಂಗ್ರೆಸ್ ಸರ್ಕಾರ ಯೋಜಿಸುತ್ತಿದೆ ಎಂದು ಅವರು ಹೇಳಿದರು.