ರಾಯಚೂರು/ಮೈಸೂರು:
ಸಿದ್ದರಾಮನಹುಂಡಿಯಲ್ಲಿ ಕಾರು-ಬೈಕ್ ಡಿಕ್ಕಿಯಿಂದ ಜಗಳ ನಡೆದಿದೆ. ಬಿಜೆಪಿಯವರು ಇದಕ್ಕೆ ರಾಜಕೀಯ ಬಣ್ಣ ಬಳಿಯುತ್ತಿದ್ದಾರೆ ಎಂದು ಮೈಸೂರಿನಲ್ಲಿ ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದರು.
ಸಿದ್ದರಾಮನಹುಂಡಿಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ಹಲ್ಲೆ ಆರೋಪ ವಿಚಾರವಾಗಿ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಗಲಭೆ ಮಾಡಿಸಲು ನಿಸ್ಸೀಮರು. ಎಷ್ಟೇ ಪ್ರಚೋದನೆ ಮಾಡಿದರು ಅವರ ಪ್ರಚೋದನೆಗೆ ಕಾಂಗ್ರೆಸ್ ಕಾರ್ಯಕರ್ತರು ಒಳಗಾಗಬಾರದು. ಬಿಜೆಪಿ ತನ್ನ ರಾಜಕೀಯ ಲಾಭಕ್ಕಾಗಿ ಈ ರೀತಿ ಕಾರ್ಯತಂತ್ರ ಮಾಡುತ್ತಿದೆ ಎಂದು ಹರಿಹಾಯ್ದರು.
2/2 pic.twitter.com/Zj41MdvdBg
— Dr Yathindra Siddaramaiah (@Dr_Yathindra_S) April 28, 2023
ಬಿಜೆಪಿ ಹಸಿ ಸುಳ್ಳು ಹೇಳುತ್ತಾ ದ್ವೇಷ ಹುಟ್ಟುಹಾಕಿ ತನ್ನ ಬೇಳೆ ಬೇಯಿಸಿಕೊಳ್ಳುವ ತಂತ್ರ ಮಾಡುತ್ತಿದೆ. ಗಲಾಟೆ ನಡೆದ ವೇಳೆ ಸಿದ್ದರಾಮಯ್ಯ ಕುಟುಂಬದವರು ಯಾರೂ ಅಲ್ಲಿ ಇರಲಿಲ್ಲ. ಆದರೂ ದುರುದ್ದೇಶದಿಂದ ನಮ್ಮ ಕುಟುಂಬದ ಸದಸ್ಯರ ಮೇಲೆ ದೂರು ನೀಡಿದ್ದಾರೆ ಎಂದು ಆರೋಪಿಸಿದರು.
ಮೈಸೂರು ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಸಂದರ್ಭ.
— Dr Yathindra Siddaramaiah (@Dr_Yathindra_S) April 28, 2023
1/2 pic.twitter.com/4BOoIHjhbB
ಇನ್ನು ಈ ಬಗ್ಗೆ ರಾಯಚೂರಿನಲ್ಲಿಂದುಮಾತನಾಡಿರುವ ಮಾಜಿ ಮುಖ್ಯಮಂತ್ರಿ ವರುಣಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ. ರಾಜ್ಯಾದ್ಯಂತ ಕಾಂಗ್ರೆಸ್ ಪರ ಅಲೆಯಿದೆ, ಸಿದ್ದರಾಮನಹುಂಡಿಯಲ್ಲಿ ಕಾಂಗ್ರೆಸ್ ಪರ ಜನರ ಒಲವಿದೆ ಇದರಿಂದ ಹತಾಶೆಯಿಂದ ಬಿಜೆಪಿಯವರು ಗಲಾಟೆ ಮಾಡುತ್ತಿದ್ದಾರೆ ಎಂದರು