Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ‘ಬಿಜೆಪಿಯದ್ದು ಪಿಕ್ ಪಾಕೆಟ್ ಸರ್ಕಾರ: ಡಿ.ಕೆ. ಶಿವಕುಮಾರ್ ವಾಗ್ದಾಳಿ
  • ರಾಜಕೀಯ
  • ಕರ್ನಾಟಕ
  • ನಗರ
  • ಬೆಳಗಾವಿ

‘ಬಿಜೆಪಿಯದ್ದು ಪಿಕ್ ಪಾಕೆಟ್ ಸರ್ಕಾರ: ಡಿ.ಕೆ. ಶಿವಕುಮಾರ್ ವಾಗ್ದಾಳಿ

The Bengaluru Live June 11, 2021 12:59 PM 1 minute read
‘ಬಿಜೆಪಿಯದ್ದು ಪಿಕ್ ಪಾಕೆಟ್ ಸರ್ಕಾರ: ಡಿ.ಕೆ. ಶಿವಕುಮಾರ್ ವಾಗ್ದಾಳಿ

‘ಬಿಜೆಪಿಯದ್ದು ಪಿಕ್ ಪಾಕೆಟ್ ಸರ್ಕಾರ: ಡಿ.ಕೆ. ಶಿವಕುಮಾರ್ ವಾಗ್ದಾಳಿ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಪ್ರತಿಭಟನಾನಿರತ ಶಿವಕುಮಾರ್, ಸಿದ್ದರಾಮಯ್ಯ, ಆರ್.ವಿ. ದೇಶಪಾಂಡೆ, ದಿನೇಶ್ ಗುಂಡೂರಾವ್, ಅಶೋಕ ಪಟ್ಟಣ, ಪ್ರಕಾಶ್ ರಾಥೋಡ್, ವಿ.ಆರ್. ಸುದರ್ಶನ್, ಶೇಖರ್ ಬಂಧನ

ಬೆಂಗಳೂರು:

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮೂಲಕ ಜನಸಾಮಾನ್ಯರ ಜೇಬಿಗೆ ಕನ್ನ ಹಾಕುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ‘100 ನಾಟ್ ಔಟ್’ ಆಂದೋಲನ ಆರಂಭಿಸಿದ್ದು, ‘ಬಿಜೆಪಿಯದ್ದು ಪಿಕ್ ಪಾಕೆಟ್ ಸರ್ಕಾರವಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ವಾಗ್ದಾಳಿ ನಡೆಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಐದು ದಿನಗಳ ಕಾಲ ನಡೆಯಲಿರುವ ಈ ಪ್ರತಿಭಟನಾ ಆಂದೋಲನಕ್ಕೆ ಬೆಂಗಳೂರಿನ ಶಿವಾನಂದ ವೃತ್ತದ ಬಳಿ ರೆಡ್ಡಿ ಪೆಟ್ರೋಲ್ ಬಂಕ್ ಬಳಿ ಶುಕ್ರವಾರ ಪ್ರತಿಭಟನೆ ಮಾಡಿ ಚಾಲನೆ ನೀಡಿದರು. ಈ ಪ್ರತಿಭಟನೆಯಲ್ಲಿ ಮಾಜಿ ಸಚಿವರಾದ ಆರ್.ವಿ. ದೇಶಪಾಂಡೆ, ದಿನೇಶ್ ಗುಂಡೂರಾವ್ ಮತ್ತಿತರ ನಾಯಕರು ಪಾಲ್ಗೊಂಡಿದ್ದರು.

ಈ ವೇಳೆ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಿಷ್ಟು:

‘ಬಹಳ ವಿಶೇಷ ಹಾಗೂ ಐತಿಹಾಸಿಕ ದಿನಕ್ಕೆ ನಾವೆಲ್ಲ ಸಾಕ್ಷಿಯಾಗಿದ್ದೇವೆ. ಭಾರತ ಸರ್ಕಾರ ದೇಶದ ಪ್ರತಿಯೊಬ್ಬ ಪ್ರಜೆಗೂ ಬರೆ ಎಳೆದಿದೆ. ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ, ಕೇವಲ ಪೆಟ್ರೋಲ್, ಡೀಸೆಲ್ ಹಾಕಿಸಿಕೊಂಡು ವಾಹನ ಚಲಾಯಿಸುವವರಿಗೆ ಮಾತ್ರ ಪರಿಣಾಮ ಬೀರುತ್ತಿಲ್ಲ. ಪ್ರತಿ ನಾಗರೀಕನೂ ಖರೀದಿಸುವ ಪ್ರತಿ ವಸ್ತುಗಳು ದುಬಾರಿಯಾಗುವಂತೆ ಬರೆ ಎಳೆದಿದ್ದಾರೆ.

Petrol price hike DK arrested

ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ವಿರುದ್ಧ ನಾವು ಹೋರಾಟ ಮಾಡಬೇಕಿದೆ. ಹಿಂದೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಸಾಕಷ್ಟು ಹೋರಾಟ ಮಾಡಿದ್ದನ್ನು ನಾವು ನೋಡಿದ್ದೇವೆ. ಇದೇ ಯಡಿಯೂರಪ್ಪ, ಶೋಭ ಕರಂದ್ಲಾಜೆ ಹಾಗೂ ಸಚಿವರೆಲ್ಲರು ಯುಪಿಎ ಸರ್ಕಾರದ ಅವಧಿಯಲ್ಲಿ ಒಂದೆರಡು ರೂಪಾಯಿ ಹೆಚ್ಚಾದಾಗ ಗಲಾಟೆ ಮಾಡಿದ್ದರು. ಆದರೆ ಕೇಂದ್ರದ ಬಿಜೆಪಿ ಸರ್ಕಾರ ಈ ವರ್ಷ ಜನವರಿಯಿಂದ ಇಲ್ಲಿಯವರೆಗೂ 42 ಕ್ಕೂ ಹೆಚ್ಚು ಬಾರಿ ಬೆಲೆ ಏರಿಕೆ ಮಾಡಿದೆ. ಏಪ್ರಿಲ್ ನಲ್ಲಿ ಚುನಾವಣೆ ಹಿನ್ನೆಲೆಯಲ್ಲಿ ದರ ಹೆಚ್ಚಾಗಲಿಲ್ಲ. ಅದನ್ನು ಬಿಟ್ಟರೆ ಉಳಿದ ಐದು ತಿಂಗಳೂ ಬೆಲೆ ಹೆಚ್ಚಳ ಮಾಡಿದೆ.

ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ಬೆಲೆ ಹೆಚ್ಚಿಸಿ, 20.60 ಲಕ್ಷ ಕೋಟಿ ತೆರಿಗೆ ಸಂಗ್ರಹಿಸಿದೆ. ಸರ್ಕಾರ ತನ್ನ ಆದಾಯ ವೃದ್ಧಿ ಮಾಡಿಕೊಳ್ಳಲು, ಬೊಕ್ಕಸ ತುಂಬಿಸಿಕೊಳ್ಳಲು ಎಲ್ಲ ಪದಾರ್ಥಗಳ ಬೆಲೆ ಹೆಚ್ಚಳ ಮಾಡುತ್ತಿದೆ. ಇದು ಜನರ ನಿತ್ಯ ಬದುಕಿನಲ್ಲಿ ಸಮಸ್ಯೆ ಉಂಟು ಮಾಡುತ್ತಿದೆ. ಕೇಂದ್ರ ಸರ್ಕಾರ ಜನರ ಜೇಬಿಗೆ ಕನ್ನ ಹಾಕುತ್ತಿದ್ದು, ಇದೊಂದು ಪಿಕ್ ಪಾಕೆಟ್ ಸರ್ಕಾರ. ಇದರ ಬಗ್ಗೆ ನಾವು ಜನರಲ್ಲಿ ತಿಳುವಳಿಕೆ ಮೂಡಿಸಿ, ಹೋರಾಟ ಮಾಡಬೇಕಿದೆ.

ಈ ಹಿಂದೆ ಇಂಧನ ಬೆಲೆ ಎಷ್ಟಿತ್ತು, ಈಗ ಎಷ್ಟಾಗಿದೆ ಎಂದು ನಾವು ತಿಳಿಸಿದ್ದೇವೆ. ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆ ಇಳಿಸಿ ತೈಲಬೆಲೆಗೆ ಅನುಗುಣವಾಗಿ ದರ ಇಳಿಸಬೇಕು. ಜನರಿಗೆ ಹಣ ವಾಪಸ್ ನೀಡಬೇಕು, ಜನರಿಂದ ದೋಚುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿ ನಾವಿಂದು ಪ್ರತಿಭಟನೆ ಆರಂಭಿಸಿದ್ದು, ರಾಜ್ಯದಲ್ಲಿ ಒಟ್ಟು 5 ಸಾವಿರ ಕಡೆಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದೇವೆ. ಈ ಹೋರಾಟ ಐದು ದಿನಗಳ ಕಾಲ ನಡೆಯಲಿದ್ದು, ಇಂದು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮಾಡಲಾಗುತ್ತಿದೆ. ನಾಳೆ ತಾಲೂಕು ಕೇಂದ್ರ, ನಾಡಿದ್ದು ಜಿಲ್ಲಾ ಪಂಚಾಯ್ತಿ ಮತ್ತು ಹೋಬಳಿ ಕೇಂದ್ರಗಳಲ್ಲಿ 14ರಂದು ಗ್ರಾಮಪಂಚಾಯ್ತಿ ವ್ಯಾಪ್ತಿ ಪೆಟ್ರೋಲ್ ಬಂಕ್ ಬಳಿ ಹಾಗೂ 15ರಂದು ಇತರೆ ಕಡೆಗಳಲ್ಲಿ ಪ್ರತಿಭಟನೆ ಮಾಡಲಿದ್ದೇವೆ.

ಪ್ರತಿಭಟನೆಯಲ್ಲಿ ಮಾಜಿ ಸಚಿವರಾದ @RV_Deshpande, @dineshgrao ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು. ಈ ಪ್ರತಿಭಟನೆ ಇಂದಿನಿಂದ ಹಂತ-ಹಂತವಾಗಿ ರಾಜ್ಯಾದ್ಯಂತ ಐದು ದಿನಗಳ ಕಾಲ 5000ಕ್ಕೂ ಹೆಚ್ಚು ಪೆಟ್ರೋಲ್ ಬಂಕ್‌ಗಳ ಮುಂದೆ ನಡೆಯಲಿದೆ.#Petrol100NotOut pic.twitter.com/ii4rAdUFLE

— Karnataka Congress (@INCKarnataka) June 11, 2021

ನಮ್ಮ ಎಲ್ಲ ನಾಯಕರು ಇದೇ ರೀತಿ ಕೋವಿಡ್ ನಿಯಮ ಪಾಲನೆ ಮಾಡಿಕೊಂಡು ಅಂತರ ಕಾಪಾಡಿಕೊಂಡು ಪ್ರತಿಭಟನೆ ಮಾಡಬೇಕು. ಸರ್ಕಾರ ಕೋವಿಡ್ ಇದ್ದರೂ ಚುನಾವಣೆ ನಡೆಸಿದೆ. ಆದರೂ ಅವರ ಮೇಲೆ ಪ್ರಕರಣ ದಾಖಲಾಗಿಲ್ಲ. ಆದರೆ ನಮಗೆ ಪೊಲೀಸ್ ಅಧಿಕಾರಿಗಳು ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ನೀವು ಚುನಾವಣೆ ನಡೆಸಿದ್ದಕ್ಕೆ, ದೇವಾಲಯಕ್ಕೆ ಹೋಗಿದ್ದಕ್ಕೆ ಹಾಗೂ ಹೋಮಗಳನ್ನು ಮಾಡಿದ್ದಕ್ಕೆ ಯಾಕೆ ಪ್ರಕರಣ ಇಲ್ಲ. ನಿಮ್ಮ ಈ ಬೆದರಿಕೆಗೆ ಕಾಂಗ್ರೆಸಿಗರು ಹೆದರುವುದಿಲ್ಲ. ಈ ದೇಶದ ಸ್ವಾತಂತ್ರ್ಯಕ್ಕೆ ಪ್ರಾಣ ಕೊಟ್ಟವರು ನಾವು. ನಮ್ಮ ಹೋರಾಟ ಇದೇ ರೀತಿ ಮುಂದುವರಿಯಲಿದ್ದು, ಜನರೇ ನಿಮ್ಮ ಸರ್ಕಾರವನ್ನು ಕಿತ್ತೊಗೆಯಲಿದೆ.

ಸಾವಿನಲ್ಲಿ, ಔಷಧಿಯಲ್ಲಿ, ಆಸ್ಪತ್ರೆ ಹಾಸಿಗೆಯಲ್ಲಿ ಹಣ ದೋಚಿದ್ದಲ್ಲದೇ, ಈಗ ಪೆಟ್ರೋಲ್ ಮತ್ತು ಡೀಸೆಲ್ ಮೂಲಕ ಜನರನ್ನು ಪಿಕ್ ಪಾಕೆಟ್ ಮಾಡುತ್ತಿದ್ದೀರಿ. ನಾಳೆಯಿಂದ ನಮ್ಮ ನಾಯಕರೆಲ್ಲರೂ ಜಿಲ್ಲೆ, ತಾಲೂಕು, ಪಂಚಾಯ್ತಿ ಮಟ್ಟಕ್ಕೆ ಹೋಗಿ ಸರ್ಕಾರದ ದುರಾಡಳಿತವನ್ನು ಜನರಿಗೆ ತಿಳಿಸುವ ಕೆಲಸ ಮಾಡುತ್ತಾರೆ.

ನೆರೆ ರಾಷ್ಟ್ರಗಳಲ್ಲಿ ಇಂಧನ ಬೆಲೆ ನಮಗಿಂತ ಅರ್ಧದಷ್ಟಿದೆ. ನೀವು ಮಾತ್ರ ಜನರಿಂದ ಸುಲಿಗೆ ಮಾಡುತ್ತಲೇ ಇದ್ದೀರಿ. ಇದನ್ನು ನಿಲ್ಲಿಸಿ ಇಂಧನ ಬೆಲೆ ಇಳಿಸಬೇಕು ಎಂದು ನಾನು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇನೆ. ಬಿಜೆಪಿ ನಾಯಕರು ಈ ಹಿಂದೆ ಏನೇನು ಮಾತನಾಡಿದ್ದರು ಎಂಬುದೆಲ್ಲವನ್ನು ನಾವು ಸಾಮಾಜಿಕ ಜಾಲತಾಣಗಳಲ್ಲಿ ಹಾಕುತ್ತೇವೆ. ಈ ಹಿಂದೆ ಅವರು ಪ್ರತಿಭಟನೆ ಮಾಡಿದ್ದ ಫೋಟೋವನ್ನು ಮುಖ್ಯಮಂತ್ರಿಗಳಿಗೆ ಉಡುಗೊರೆಯಾಗಿ ಕಳುಹಿಸಿ ಕೊಡುತ್ತೇವೆ.’

About the Author

The Bengaluru Live

Administrator

Visit Website View All Posts

Post navigation

Previous: ಬೆಂಗಳೂರು ನಗರ ಸೇರಿ 19 ಜಿಲ್ಲೆಗಳಲ್ಲಿ ಲಾಕ್‌ಡೌನ್ ಸಡಿಲ: ಯಡಿಯೂರಪ್ಪ
Next: ಡಿಸಿಎಂ ಜತೆ ಚರ್ಚೆ 30ಕ್ಕೂ ವಿವಿಧ ಮಠಗಳ ಸ್ವಾಮೀಜಿಗಳು

Related Stories

ಟೋಕಿಯೊದಲ್ಲಿ ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಅವರೊಂದಿಗೆ ಹಸ್ತಲಾಘವ ಮಾಡುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಭೇಟಿ ಮಾಡಿದ ಸಿಎಂ ಶಿವಕುಮಾರ್: 2027ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಜಪಾನ್ ನಿಯೋಗಕ್ಕೆ ಆಹ್ವಾನ

The Bengaluru Live November 25, 2026 10:58 AM
ಮಳೆಯಲ್ಲಿ ರಸ್ತೆಯಲ್ಲಿ ಸಾಗುತ್ತಿರುವ ವಾಹನ ಹಾಗೂ ಕೊಡೆ ಹಿಡಿದ ಮಹಿಳೆ; ಸಾಂದರ್ಭಿಕ ಸಂಗ್ರಹ ಚಿತ್ರ
  • ನಗರ
  • ಬೆಂಗಳೂರು

ಬೆಂಗಳೂರಿನಲ್ಲಿ ನವೆಂಬರ್ 25ರಿಂದ 27ರವರೆಗೆ ಹಗುರ ಮಳೆ ಸಾಧ್ಯತೆ: ಐಎಂಡಿ

The Bengaluru Live November 25, 2026 10:01 AM
ಅಜಿನೊಮೊಟೊ ಪ್ರತಿನಿಧಿಗಳೊಂದಿಗೆ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್
  • ಕರ್ನಾಟಕ

ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್

The Bengaluru Live November 24, 2026 9:28 PM

Latest Post

ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಭೇಟಿ ಮಾಡಿದ ಸಿಎಂ ಶಿವಕುಮಾರ್: 2027ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಜಪಾನ್ ನಿಯೋಗಕ್ಕೆ ಆಹ್ವಾನ ಟೋಕಿಯೊದಲ್ಲಿ ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಅವರೊಂದಿಗೆ ಹಸ್ತಲಾಘವ ಮಾಡುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಭೇಟಿ ಮಾಡಿದ ಸಿಎಂ ಶಿವಕುಮಾರ್: 2027ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಜಪಾನ್ ನಿಯೋಗಕ್ಕೆ ಆಹ್ವಾನ

November 25, 2026 10:58 AM
ಬೆಂಗಳೂರಿನಲ್ಲಿ ನವೆಂಬರ್ 25ರಿಂದ 27ರವರೆಗೆ ಹಗುರ ಮಳೆ ಸಾಧ್ಯತೆ: ಐಎಂಡಿ ಮಳೆಯಲ್ಲಿ ರಸ್ತೆಯಲ್ಲಿ ಸಾಗುತ್ತಿರುವ ವಾಹನ ಹಾಗೂ ಕೊಡೆ ಹಿಡಿದ ಮಹಿಳೆ; ಸಾಂದರ್ಭಿಕ ಸಂಗ್ರಹ ಚಿತ್ರ
  • ನಗರ
  • ಬೆಂಗಳೂರು

ಬೆಂಗಳೂರಿನಲ್ಲಿ ನವೆಂಬರ್ 25ರಿಂದ 27ರವರೆಗೆ ಹಗುರ ಮಳೆ ಸಾಧ್ಯತೆ: ಐಎಂಡಿ

November 25, 2026 10:01 AM
ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

November 24, 2026 10:00 PM
ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

November 24, 2026 9:49 PM
ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್ ಅಜಿನೊಮೊಟೊ ಪ್ರತಿನಿಧಿಗಳೊಂದಿಗೆ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್
  • ಕರ್ನಾಟಕ

ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್

November 24, 2026 9:28 PM
ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ ಜಪಾನ್ ಪ್ರವಾಸದ ವೇಳೆ ರೈಲಿನಲ್ಲಿ ಕುಳಿತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ

November 24, 2026 9:09 PM

ನೀವು ತಪ್ಪಿಸಿಕೊಂಡಿರಬಹುದು

ಟೋಕಿಯೊದಲ್ಲಿ ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಅವರೊಂದಿಗೆ ಹಸ್ತಲಾಘವ ಮಾಡುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಭೇಟಿ ಮಾಡಿದ ಸಿಎಂ ಶಿವಕುಮಾರ್: 2027ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಜಪಾನ್ ನಿಯೋಗಕ್ಕೆ ಆಹ್ವಾನ

The Bengaluru Live November 25, 2026 10:58 AM
ಮಳೆಯಲ್ಲಿ ರಸ್ತೆಯಲ್ಲಿ ಸಾಗುತ್ತಿರುವ ವಾಹನ ಹಾಗೂ ಕೊಡೆ ಹಿಡಿದ ಮಹಿಳೆ; ಸಾಂದರ್ಭಿಕ ಸಂಗ್ರಹ ಚಿತ್ರ
  • ನಗರ
  • ಬೆಂಗಳೂರು

ಬೆಂಗಳೂರಿನಲ್ಲಿ ನವೆಂಬರ್ 25ರಿಂದ 27ರವರೆಗೆ ಹಗುರ ಮಳೆ ಸಾಧ್ಯತೆ: ಐಎಂಡಿ

The Bengaluru Live November 25, 2026 10:01 AM
ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

The Bengaluru Live November 24, 2026 10:00 PM
ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

The Bengaluru Live November 24, 2026 9:49 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಭೇಟಿ ಮಾಡಿದ ಸಿಎಂ ಶಿವಕುಮಾರ್: 2027ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಜಪಾನ್ ನಿಯೋಗಕ್ಕೆ ಆಹ್ವಾನ
  • ಬೆಂಗಳೂರಿನಲ್ಲಿ ನವೆಂಬರ್ 25ರಿಂದ 27ರವರೆಗೆ ಹಗುರ ಮಳೆ ಸಾಧ್ಯತೆ: ಐಎಂಡಿ
  • ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ
  • ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ
©Copyright 2025 The Bengaluru Live All rights reserved. | MoreNews by AF themes.