ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ನಡುವೆ ಮೈತ್ರಿ ವಿಚಾರವಾಗಿ ಮಾತನಾಡಿದ JDS ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾ ಖಾನ್, ದೇವೇಗೌಡರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧ ಎಂದರು.
ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಯಾವುದೇ ಅಸಮಾಧಾನ ಇಲ್ಲ. ರಾಜಕಾರಣ ನಿಂತ ನೀರಲ್ಲ, ಹೀಗಾಗಿ ವರಿಷ್ಠರು ಈ ನಿರ್ಧಾರ ಕೈಗೊಂಡಿದ್ದಾರೆ ಎಂದರು. ಜಾತ್ಯತೀತ ಸಿದ್ದಾಂತಗಳನ್ನ ಇಟ್ಟುಕೊಂಡಿ ರಾಜ್ಯದ ಹಿತದೃಷ್ಟಿಯಿಂದ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ. ಇದರಿಂದ ಯಾವುದೇ ಮುಸ್ಲಿಂ ಕಾರ್ಯಕರ್ತರು ಮುಖಂಡರು ಜೆಡಿಎಸ್ ನಿಂದ ದೂರ ಹೋಗಲ್ಲ.
ಮುಸ್ಲಿಂ ಸಮುದಾಯದ ಕೆಲ ಜೆಡಿಎಸ್ ನಾಯಕರಿಗೆ ಅಸಮಾಧಾನವಾಗಿರಹುದು. ಅದು ಸರಿಯಾಗುತ್ತದೆ. ಮೈತ್ರಿಯ ಬಗ್ಗೆ ಕಾಂಗ್ರೆಸ್ ಗೆ ಮಾತನಾಡಲು ಯಾವ ನೈತಿಕತೆ ಇದೆ. ಕಾಂಗ್ರೆಸ್ ನವರಿಗೆ ಜಾತ್ಯತೀತ ಅಂದರೆ ಗೊತ್ತಿದೆಯೇ? ಶಿವಸೇನೆ ಜೊತೆ ಕಾಂಗ್ರೆಸ್ ಕೈಜೋಡಿಸಿಲ್ಲವೇ ಅದು ಜಾತ್ಯತೀತನಾ? ಮುಸ್ಲಿಂ ಜೆಡಿಎಸ್ ನಾಯಕರಲ್ಲಿ ಯಾವುದೇ ಅಸಮಾಧಾನವಿಲ್ಲ ಎಂದರು.
The post BJP- JDS Allience: ಮೈತ್ರಿಗೆ JDS ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾ ಖಾನ್ ಬೆಂಬಲ appeared first on Ain Live News.