ಬೆಂಗಳೂರು:
ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ರಾಜ್ಯದ ಉಸ್ತುವಾರಿಗಳೂ ಆದ ಶ್ರೀ ಅರುಣ್ ಸಿಂಗ್ ಅವರು ಏಪ್ರಿಲ್ 8ರಿಂದ 11ರವರೆಗೆ ರಾಜ್ಯದಲ್ಲಿ ಪ್ರವಾಸ ಮಾಡುವರು. ವಿವಿಧ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸುವರು.
ಏ.8ರಂದು ಮಧ್ಯಾಹ್ನ 1.30ಕ್ಕೆ ಬೆಂಗಳೂರು ವಿಮಾನನಿಲ್ದಾಣಕ್ಕೆ ಆಗಮಿಸುವ ಅವರು ಬಳಿಕ ಅಲ್ಲಿಂದ ಮಂಗಳೂರಿಗೆ ತೆರಳುವರು. ಬಳಿಕ ರಾತ್ರಿ ಪುತ್ತೂರಿನ ಕುಂಜಾಡಿಯಲ್ಲಿ ಪೂರ್ವ ನಿಗದಿತ ಕಾರ್ಯಕ್ರಮದಲ್ಲಿ ಭಾಗವಹಿಸುವರು. ರಾತ್ರಿ ಮಂಗಳೂರಿನಲ್ಲಿ ವಾಸ್ತವ್ಯ ಇರುವರು.
ಏ.9ರಂದು ಬೆಳಗಾವಿಯಲ್ಲಿ, 10ರಂದು ಮಸ್ಕಿಯಲ್ಲಿ ಹಾಗೂ 11ರಂದು ಬಸವಕಲ್ಯಾಣದಲ್ಲಿ ಚುನಾವಣಾ ಪ್ರಚಾರ ಸಭೆಗಳಲ್ಲಿ ಅವರು ಭಾಗವಹಿಸುವರು. 11ರಂದು ಸಂಜೆ ಅವರು ಹೈದರಾಬಾದ್ ವಿಮಾನನಿಲ್ದಾಣದಿಂದ ದೆಹಲಿಗೆ ತೆರಳಲಿದ್ದಾರೆ.